ಯುವಕರು ಮತದಾನಕ್ಕೆ ಮುಂದಾದ್ರೆ ದೇಶದ ಅಭಿವೃದ್ಧಿ: ಶರಬೈ

| Published : Feb 01 2024, 02:03 AM IST

ಯುವಕರು ಮತದಾನಕ್ಕೆ ಮುಂದಾದ್ರೆ ದೇಶದ ಅಭಿವೃದ್ಧಿ: ಶರಬೈ
Share this Article
  • FB
  • TW
  • Linkdin
  • Email

ಸಾರಾಂಶ

ಮತದಾನವೆಂಬುವುದು ಪ್ರತಿಯೊಬ್ಬರ ವೈಯಕ್ತಿಕ ಹಕ್ಕು. ಅದನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಯಾವುದೇ ಆಮಿಷಗಳಿಗೊಳಗಾಗದೇ, ಅಮೂಲ್ಯವಾದ ಮತವನ್ನು ಯೋಗ್ಯ ಅಭ್ಯರ್ಥಿಗಳಿಗೆ ನೀಡಬೇಕು. ಇದರಿಂದ ಸದೃಢ ರಾಷ್ಟ್ರ ನಿರ್ಮಾಣ ಮಾಡಬಹುದಾಗಿದೆ.

ಕನ್ನಡಪ್ರಭ ವಾರ್ತೆ ಗುರುಮಠಕಲ್

ದೇಶದ ಭವಿಷ್ಯ ಯುವಕರ ಕೈಯಲ್ಲಿದ್ದು, ಯುವ ಮತದಾರರು ಮತದಾನ ಮಾಡಲು ಮುಂದಾದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ್ ಶರಬೈ ಹೇಳಿದರು.

ಪಟ್ಟಣದ ಎಸ್‌ವಿ ಪಿಯು ಕಾಲೇಜು ಆವರಣದಲ್ಲಿ ತಾಪಂ, ಪುರಸಭೆ, ಚೈತನ್ಯ ಪದವಿ ಕಾಲೇಜು ಹಾಗೂ ಎಸ್‌ವಿ ಪಿಯು ಕಾಲೇಜು ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಮತದಾನ ಪೆಟ್ಟಿಗೆ ಮಾದರಿಗೆ ರಾಷ್ಟ್ರೀಯ ಯುವ ಮತದಾರ ದಿನಾಚರಣೆ ಪತ್ರಿಕೆ ಅಂಟಿಸುವ ಮೂಲಕ ಚಾಲನೆ ನೀಡಿ, ಮಾತನಾಡಿದರು.

ಮತದಾನವೆಂಬುವುದು ಪ್ರತಿಯೊಬ್ಬರ ವೈಯಕ್ತಿಕ ಹಕ್ಕು. ಅದನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಯಾವುದೇ ಆಮಿಷಗಳಿಗೊಳಗಾಗದೇ, ಅಮೂಲ್ಯವಾದ ಮತವನ್ನು ಯೋಗ್ಯ ಅಭ್ಯರ್ಥಿಗಳಿಗೆ ನೀಡಬೇಕು. ಇದರಿಂದ ಸದೃಢ ರಾಷ್ಟ್ರ ನಿರ್ಮಾಣ ಮಾಡಬಹುದಾಗಿದೆ ಎಂದರು.

ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಮಾತನಾಡಿ, ಮತದಾನವು ಪ್ರತಿಯೊಬ್ಬರ ಜವಾಬ್ದಾರಿ ಮತ್ತು ಹಕ್ಕು. ಇದನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು. ಕಡ್ಡಾಯವಾಗಿ ಮತದಾನ ಮಾಡಬೇಕು. ಕಳೆದ ಬಾರಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರ ಪ್ರಮಾಣ ಹೆಚ್ಚಿಸುವಲ್ಲಿ ಅತ್ಯಂತ ಉತ್ತಮ ಕಾರ್ಯವಾಗಿದೆ. ಮತದಾನದ ಪ್ರಮಾಣ ಹೆಚ್ಚಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮತದಾರರ ಪ್ರತಿಜ್ಞಾನ ವಿಧಿ ಸ್ವೀಕರಿಸಲಾಯಿತು. ಚೈತನ್ಯ ಪದವಿ ಕಾಲೇಜು ಸಂಸ್ಥೆ ಅಧ್ಯಕ್ಷ ಎಂ.ಬಿ. ನಾಯಕಿನ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಪ್ರಾಚಾರ್ಯ ನರಸಿಂಹಲು ಕಾನಗಡ್ಡ, ಯುವ ಮತದಾರರಾದ ವಾಸವಿ, ಸದ್ದಾಂ ಹುಸೇನ್ ವೇದಿಕೆಯಲ್ಲಿದ್ದರು. ಉಪನ್ಯಾಸಕ ಸಾಬರೆಡ್ಡಿ ನಿರೂಪಿಸಿದರು. ಉಪನ್ಯಾಸಕ ನವಾದರೆಡ್ಡಿ ಸ್ವಾಗತಿಸಿದರು. ಉಪನ್ಯಾಸಕಿ ಸುವರ್ಣ ವಂದಿಸಿದರು.