ಸಾರಾಂಶ
ಗ್ರಾಮೀಣ ಪ್ರದೇಶದ ರೈತರ ಸಂಕಷ್ಟಗಳನ್ನು ಹತ್ತಿರದಿಂದ ಕಂಡಿದ್ದೇವೆ. ಜೀವನೋಪಾಯಕ್ಕಾಗಿ ಹಸುಗಳನ್ನು ಸಾಕಿ ಹಾಲು ಉತ್ಪಾದಕ ಸಹಕಾರ ಸಂಘಕ್ಕೆ ಹಾಲನ್ನು ಹಾಕುವ ಮೂಲಕ ಬರುವ ಹಣದಲ್ಲಿ ಜೀವನ ಸಾಗಿಸುತ್ತಿದ್ದಾರೆ. ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ರೀತಿಯಲ್ಲಿ ಶ್ರಮಿಸಲಾಗುವುದು.
ಕನ್ನಡಪ್ರಭ ವಾರ್ತೆ ಮಳವಳ್ಳಿ
ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ವರದಾನವಾಗಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರ ಸಹಕಾರದೊಂದಿಗೆ ಅಭಿವೃದ್ಧಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮನ್ಮುಲ್ ನಾಮ ನಿರ್ದೇಶಕ ಆರ್.ಎನ್. ವಿಶ್ವಾಸ್ ತಿಳಿಸಿದರು.ತಾಲೂಕಿನ ರಾಗಿ ಬೊಮ್ಮನಹಳ್ಳಿಯಲ್ಲಿ ಮನ್ಮುಲ್ ನಾಮ ನಿರ್ದೇಶನಗೊಂಡ ಹಿನ್ನೆಲೆಯಲ್ಲಿ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ರೈತರ ಸಂಕಷ್ಟಗಳನ್ನು ಹತ್ತಿರದಿಂದ ಕಂಡಿದ್ದೇವೆ. ಜೀವನೋಪಾಯಕ್ಕಾಗಿ ಹಸುಗಳನ್ನು ಸಾಕಿ ಹಾಲು ಉತ್ಪಾದಕ ಸಹಕಾರ ಸಂಘಕ್ಕೆ ಹಾಲನ್ನು ಹಾಕುವ ಮೂಲಕ ಬರುವ ಹಣದಲ್ಲಿ ಜೀವನ ಸಾಗಿಸುತ್ತಿದ್ದಾರೆ. ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ರೀತಿಯಲ್ಲಿ ಶ್ರಮಿಸಲಾಗುವುದು ಎಂದರು.
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ರೈತರ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ನನಗೆ ಸಿಕ್ಕಿರುವ ಅಧಿಕಾರವನ್ನು ಸಮರ್ಪಕವಾಗಿ ಬಳಸಿಕೊಂಡು ರೈತರ ಹೇಳಿಗೆಗೆ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.ಈ ವೇಳೆ ವಕೀಲ ಮಂಜುನಾಥ್, ಮುಖಂಡರಾದ ಚೇತನ್‌ನಾಯಕ್, ಹರೀಶ್, ಚಂದ್ರಶೇಖರ್, ವಿಜಿಕುಮಾರ್ ಸೇರಿದಂತೆ ಹಲವರು ವಿಶ್ವಾಸ್ ಅವರನ್ನು ಅಭಿನಂದಿಸಿದರು.
ಕೆಆರ್ ಎಸ್ ನೀರಿನ ಮಟ್ಟಗರಿಷ್ಠ ಮಟ್ಟ - 124.80 ಅಡಿ
ಇಂದಿನ ಮಟ್ಟ – 124.80 ಅಡಿಒಳ ಹರಿವು – 3,952 ಕ್ಯುಸೆಕ್
ಹೊರ ಹರಿವು – 5,034 ಕ್ಯುಸೆಕ್ನೀರಿನ ಸಂಗ್ರಹ – 49.452 ಟಿಎಂಸಿ