ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯ ಎಂದು ಯಶೋಧಾ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಮದ್ರಕಿ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯ ಎಂದು ಯಶೋಧಾ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಮದ್ರಕಿ ಹೇಳಿದರು.ಯಶೋಧಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ಗಳ ವತಿಯಿಂದ ಆಯೋಜಿಸಲಾದ ಯಶೋಧಾ ಚೈತ್ರೋತ್ಸವ-2026 ಕ್ರೀಡೋತ್ಸವದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ನಿಯಮಿತವಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಿಸ್ತು, ಸಹಕಾರ ಮತ್ತು ನಾಯಕತ್ವ ಗುಣಗಳನ್ನು ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.ಗೌರವ ಅತಿಥಿ ಡಾ.ಕಮಲಾ ಮದ್ರಕಿ ಮಾತನಾಡಿ, ವಿದ್ಯಾರ್ಥಿಗಳು ಪಾಠಗಳ ಜೊತೆಗೆ ಕ್ರೀಡೆಗಳಲ್ಲಿಯೂ ತೊಡಗಿಸಿಕೊಂಡು ಸಮಗ್ರ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಡಾ.ಅಶೋಕ್ ಜಾಧವ್ ಮಾತನಾಡಿ, ಕ್ರೀಡೆಗಳು ಆರೋಗ್ಯಕರ ಜೀವನಕ್ಕೆ ಮಾರ್ಗದರ್ಶಕವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ರಮೇಶ್ ಚೌಧರಿ, ಪ್ರಾಂಶುಪಾಲರಾದ ಪ್ರೊ.ಗುರುಶಾಂತ್.ಪಿ ಹಾಗೂ ನರ್ಸಿಂಗ್ ಸಲಹೆಗಾರರಾದ ವೈ.ವೈ.ಕಡಗಬಾವಿ ಉಪಸ್ಥಿತರಿದ್ದರು. ಭಾರತ ಸೇವಾದಳದ ಜಿಲ್ಲಾ ಸಂಚಾಲಕ ನಾಗೇಶ ಡೊಣುರ ಮತ್ತು ಬಂಜಾರ ಶಾಲೆಯ ದೈಹಿಕ ಶಿಕ್ಷಕ ಸೋಮಶೇಖರ ರಾಠೋಡ ಪಥ ಸಂಚಲನ, ಧ್ವಜಾರೋಹಣ ಮತ್ತು ನಾಡಗೀತೆ ನಡೆಸಿಕೊಟ್ಟರು. ಬಂಜಾರ ಬಿ.ಪಿ.ಎಡ್ ಕಾಲೇಜಿನ ಉಪನ್ಯಾಸಕ ವಿಜಯ ಚವ್ಹಾಣ, ವಿ.ಎಸ್.ಜಿ ಕಾಲೇಜಿನ ದೈಹಿಕ ನಿರ್ದೇಶಕ ಚಾಂದವಸೀಮ್ ಮುಕಾದಮ, ವಿದ್ಯಾರ್ಥಿಗಳು ನಿರ್ಣಾಯಕರಾಗಿ ಸೇವೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಯಶೋಧಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡೋತ್ಸವಕ್ಕೆ ಉತ್ಸಾಹ ತುಂಬಿದರು.ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯ. ನಿಯಮಿತವಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಿಸ್ತು, ಸಹಕಾರ ಮತ್ತು ನಾಯಕತ್ವ ಗುಣಗಳನ್ನು ಅಭಿವೃದ್ಧಿಯಾಗುತ್ತದೆ.
-ಡಾ.ರವೀಂದ್ರ ಮದ್ರಕಿ, ಯಶೋಧಾ ಆಸ್ಪತ್ರೆಯ ಮುಖ್ಯಸ್ಥರು.