ಹೊಸಕೋಟೆ: ತಾಲೂಕಿನಲ್ಲಿ ಖಾಸಗಿ ಕಂಪನಿಗಳ ಸಿಎಸ್‌ಆರ್ ನಿಧಿ ಬಳಸಿಕೊಂಡು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು

ಹೊಸಕೋಟೆ: ತಾಲೂಕಿನಲ್ಲಿ ಖಾಸಗಿ ಕಂಪನಿಗಳ ಸಿಎಸ್‌ಆರ್ ನಿಧಿ ಬಳಸಿಕೊಂಡು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ನಗರದ ಜಿಕೆಬಿಎಂಎಸ್ ಶಾಲೆ ಆವರಣದಲ್ಲಿರುವ ಸರ್ಕಾರಿ ಉರ್ದು ಶಾಲೆಗೆ ೫೬ ಲಕ್ಷ ವೆಚ್ಚದಲ್ಲಿ ೪ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಹಲವು ಉಚಿತ ಯೋಜನೆಗಳನ್ನು ರೂಪಿಸುವುದರ ಜೊತೆಗೆ ಖಾಸಗಿ ಕಂಪನಿಗಳ ಸಿಎಸ್‌ಆರ್ ನಿಧಿ ಬಳಸಿಕೊಳ್ಳುತ್ತಿದೆ. ಟೌನ್ ಜಿಕೆಬಿಎಂಎಸ್ ಶಾಲೆಗೆ ಯುನೈಟೆಡ್ ವೇ ಕಂಪನಿಯಿಂದ ೮೫ ಲಕ್ಷ ವೆಚ್ಚದಲ್ಲಿ ಕಾಂಪೌಂಡ್ ಹಾಗೂ ರಂಗಮಂದಿರ ನಿರ್ಮಾಣಕ್ಕೆ ಕಂಪನಿಗೆ ಮನವಿ ಮಾಡಿದ್ದೇವೆ ಎಂದರು. ಈ ವೇಳೆ ಬಿಇಒ ಪದ್ಮನಾಭ, ಬಿಎಂಆರ್‌ಡಿಎ ಅಧ್ಯಕ್ಷ ಕೇಶವಮೂರ್ತಿ, ಸದಸ್ಯ ಸುಬ್ಬರಾಜ್, ಮಾಜಿ ಅಧ್ಯಕ್ಷ ಡಾ.ಸಿ.ಜಯರಾಜ್, ಟೌನ್ ಬ್ಯಾಂಕ್ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಅಕ್ಬರ ಪಾಷ, ಜಿಕೆಬಿಎಂಎಸ್ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಡಿಎಸ್.ರಾಜ್ ಕುಮಾರ್, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ವಿಜಯ್‌ಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಅಮ್ಜದ್ ಬೇಗ್, ಮುಖಂಡ ನವಾಜ್ ಹಾಜರಿದ್ದರು.

ಫೋಟೋ: 22 ಹೆಚ್‌ಎಸ್‌ಕೆ 3

ಹೊಸಕೋಟೆಯ ಉರ್ದು ಶಾಲೆಯಲ್ಲಿ ಯುನೈಟೆಡ್ ವೇ ಕಂಪನಿಯ ಸಿಎಸ್‌ ಆರ್‌ ನಿಧಿಯಲ್ಲಿ ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಶರತ್ ಬಚ್ಚೇಗೌಡ ಭೂಮಿಪೂಜೆ ನೆರವೇರಿಸಿದರು.