ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳಲ್ಲಿ ಭಾರತವನ್ನು ಆರೋಗ್ಯ ಕ್ಷೇತ್ರ, ರಾಷ್ಟ್ರೀಯ ಭದ್ರತೆ, ಸ್ವಚ್ಛತೆ ಸೇರಿದಂತೆ ದೇಶದ ಸರ್ವತೋಮುಖ ಅಭಿವೃದ್ಧಿ ಮಾಡಿದ್ದಾರೆ.
ಶಿರಾ: ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳಲ್ಲಿ ಭಾರತವನ್ನು ಆರೋಗ್ಯ ಕ್ಷೇತ್ರ, ರಾಷ್ಟ್ರೀಯ ಭದ್ರತೆ, ಸ್ವಚ್ಛತೆ ಸೇರಿದಂತೆ ದೇಶದ ಸರ್ವತೋಮುಖ ಅಭಿವೃದ್ಧಿ ಮಾಡಿದ್ದಾರೆ. ಅಲ್ಲದೆ ದೇಶವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ ಹೇಳಿದರು.
ತಾಲೂಕಿನ ಹೊನ್ನಗೊಂಡನಹಳ್ಳಿ ಕುಸುಕುಂಟೆ ಗೇಟ್ ಮತ್ತು ಹೊಸೂರು ಗ್ರಾಮಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆ, ಅಭಿವೃದ್ಧಿ ಕಾರ್ಯಗಳನ್ನು ಮನೆ ಮನೆಗೆ ತೆರಳಿ ಮನವರಿಕೆ ಮಾಡಿಕೊಡಲಾಗುತ್ತಿದೆ. ಜೊತೆಗೆ ಸದಸ್ಯತ್ವ ನೋಂದಣಿ ಮಾಡಲಾಗುತ್ತಿದೆ ಎಂದರು. ಶ್ರೀರಂಗಪ್ಪ, ಈಶ್ವರ್, ಈರಣ್ಣ, ದೇವರಾಜ್, ಜಯಣ್ಣ, ಲಕ್ಷ್ಮಮ್ಮ, ಕೆಂಚಪ್ಪ ಭಾಗವಹಿಸಿದ್ದರು.