ಸಾರಾಂಶ
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪ್ರಗತಿ ಪಥ ಯೋಜನೆ ಜಾರಿಗೆ ತಂದಿದ್ದು, ಮುಂದಿನ ದಿನಗಳಲ್ಲಿ ಹದಗೆಟ್ಟ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ನಾಂದಿಯಾಗಲಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.ತಾಲೂಕಿನ ಕಲ್ಲಿಗೌಡನಹಳ್ಳಿ ಬಳಿಯ ಸಿದ್ದಯ್ಯಪುರ ಗ್ರಾಮದಲ್ಲಿ ಕನಕ ಭವನದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಬರುವ ಮಾ.೧ ರಂದು ಪ್ರಗತಿ ಪಥ ರಸ್ತೆ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗು ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ ಎಂದರು.
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಪ್ರಗತಿ ಪಥ ಯೋಜನೆಯಲ್ಲಿ ಪ್ರತಿ ಕ್ಷೇತ್ರದಲ್ಲಿ ೨೫ ರಿಂದ ೩೦ ಕಿಮಿ ನಷ್ಟು ರಸ್ತೆ ಮಾಡಲು ಅವಕಾಶವಿದೆ. ಆದ್ಯತೆ ಮೇರೆಗೆ ಗ್ರಾಮೀಣ ರಸ್ತೆಗಳಲ್ಲಿ ಹಳ್ಳಿಯಿಂದ ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಚಾಲನೆ ನೀಡಲಾಗುವುದು ಎಂದರು.ಕ್ಷೇತ್ರದಲ್ಲಿ ಸಮುದಾಯ ಭವನಗಳ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಆ ಸಮುದಾಯ ಭವನಗಳ ಪೂರ್ಣಗೊಳಿಸಲು, ಮುಖ್ಯಮಂತ್ರಿಗಳಿಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಕಾಡ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಗ್ರಾಪಂ ಅಧ್ಯಕ್ಷ ಸಿದ್ದರಾಜು, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ನಟೇಶ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಬಿ.ರಾಜಶೇಖರ್, ಗ್ರಾಪಂ ಸದಸ್ಯ ಶಿವಣ್ಣ, ಗೋಪಾಲಸ್ವಾಮಿ ಬೆಟ್ಟದ ವಲಯ ಅರಣ್ಯಾಧಿಕಾರಿ ಬಿ.ಎಂ.ಮಲ್ಲೇಶ್ ಸೇರಿದಂತೆ ಗ್ರಾಮಸ್ಥರು ಇದ್ದರು.