ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಆದ್ಯತೆ ನೀಡಿದೆ. ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಬೆಂಗಳೂರಿನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಚಿವ ಕೆ.ಎಸ್.ಬಸವಂತಪ್ಪ ಭಾಗವಹಿಸಿ ಉಪಯುಕ್ತ ಸಲಹೆಗಳನ್ನು ನೀಡಿದ್ದಾರೆ.

ದಾವಣಗೆರೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಆದ್ಯತೆ ನೀಡಿದೆ. ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಬೆಂಗಳೂರಿನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಚಿವ ಕೆ.ಎಸ್.ಬಸವಂತಪ್ಪ ಭಾಗವಹಿಸಿ ಉಪಯುಕ್ತ ಸಲಹೆಗಳನ್ನು ನೀಡಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಸಭೆಯಲ್ಲಿ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್.ಬಸವಂತಪ್ಪ ಪಾಲ್ಗೊಂಡಿದ್ದರು.

ಎಸ್ಸಿ, ಎಸ್ಟಿ ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸುವುದು, ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಶಿಕ್ಷಣ, ಉದ್ಯೋಗ, ಸ್ವಯಂ ಉದ್ಯೋಗ, ಆರ್ಥಿಕ ನೆರವು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಮುದಾಯಗಳ ಸಬಲೀಕರಣಕ್ಕೆ ಅಗತ್ಯವಿರುವ ಕ್ರಮಗಳ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲಾಯಿತು. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಿ, ಸೌಲಭ್ಯಗಳು ಅರ್ಹರಿಗೆ ತಲುಪುವಂತೆ ನೋಡಿಕೊಳ್ಳುವ ಅಗತ್ಯದ ಬಗ್ಗೆಯೂ ಗಮನ ಸೆಳೆಯಲಾಯಿತು.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸಚಿವರಾದ ಕೆ.ಎಚ್.ಮುನಿಯಪ್ಪ, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯತೀಂದ್ರ ಸಿದ್ದರಾಮಯ್ಯ, ನರೇಂದ್ರಸ್ವಾಮಿ, ರಘುಮೂರ್ತಿ, ಸಿಎಂ ಪ್ರಧಾನ ಸಲಹೆಗಾರ ಡಾ. ಜಿ.ಸಿ.ಚಂದ್ರಶೇಖರ್, ಮಾಜಿ ಸಚಿವ ಹಾಗೂ ಶಾಸಕ ಎಚ್.ಸಿ. ಮಹದೇವಪ್ಪ ಸೇರಿದಂತೆ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.

- - -

-12ಕೆಡಿವಿಜಿ31: