ಶಿವಪುರ ಧ್ವಜ ಸತ್ಯಾಗ್ರಹದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈಗಾಗಲೇ ೨ ಕೋಟಿ ರು. ಬಿಡುಗಡೆ ಮಾಡಿದೆ. ಆ ಸಂಬಂಧ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿವೆ. ಸತ್ಯಾಗ್ರಹ ಸೌಧವನ್ನು ಸ್ಮಾರಕವಾಗಷ್ಟೇ ಅಲ್ಲದೇ, ಸದಾ ಚಟುವಟಿಕೆಯ ಕೇಂದ್ರವಾಗಿಸಿ, ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಲಾಗುವುದು.
ಕನ್ನಡಪ್ರಭ ವಾರ್ತೆ ಮದ್ದೂರು
ಸ್ವಾತಂತ್ರ್ಯ ಸಂಗ್ರಾಮದ ಪ್ರತಿರೂಪದಂತಿರುವ ಶಿವಪುರ ಧ್ವಜ ಸತ್ಯಾಗ್ರಹ ಸೌಧವನ್ನು ಮುಂದಿನ ದಿನಗಳಲ್ಲಿ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.ಪಟ್ಟಣದ ಶಿವಪುರ ಧ್ವಜ ಸತ್ಯಾಗ್ರಹ ಸೌಧದಲ್ಲಿ ಎಂ.ಎಚ್.ಚನ್ನೇಗೌಡ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು ಹಾಗೂ ಮದ್ದೂರಿನ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ೭೭ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಶಿವಪುರ ಧ್ವಜ ಸತ್ಯಾಗ್ರಹದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈಗಾಗಲೇ ೨ ಕೋಟಿ ರು. ಬಿಡುಗಡೆ ಮಾಡಿದೆ. ಆ ಸಂಬಂಧ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿವೆ. ಸತ್ಯಾಗ್ರಹ ಸೌಧವನ್ನು ಸ್ಮಾರಕವಾಗಷ್ಟೇ ಅಲ್ಲದೇ, ಸದಾ ಚಟುವಟಿಕೆಯ ಕೇಂದ್ರವಾಗಿಸಿ, ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಲಾಗುವುದು ಎಂದರು.ಭಾರತವು ತನ್ನದೇ ಆದ ಸಂವಿಧಾನವನ್ನು ಅಳವಡಿಸಿಕೊಂಡು ಸ್ವಾತಂತ್ರ್ಯದ ಜೊತೆಗೆ ಸ್ವಾಭಿಮಾನ, ಸಮಾನತೆ ಮತ್ತು ನ್ಯಾಯ ಎಂಬ ಮೌಲ್ಯಗಳು ನಮ್ಮ ರಾಷ್ಟ್ರದ ಅಡಿಪಾಯವಾಗಿದೆ. ಭಾರತ ಸಂವಿಧಾನವು ಪ್ರತಿಯೊಬ್ಬ ಭಾರತೀಯ ನಾಗರಿಕನ ಹಕ್ಕು, ಕರ್ತವ್ಯ ಮತ್ತು ಕನಸುಗಳ ಪ್ರತಿಬಿಂಬವಾಗಿದ್ದು, ನಮ್ಮ ಸ್ವಾತಂತ್ರ್ಯಕ್ಕೆ ಹೋರಾಡಿದ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್, ಭಗತ್‌ಸಿಂಗ್ ಅವರಂತಹ ಮಹನೀಯರನ್ನು ನಾವುಗಳು ಸ್ಮರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕಿನ ನೂತನ ಉಪಾಧ್ಯಕ್ಷ ಸಿ.ಚೆಲುವರಾಜು, ನಿರ್ದೇಶಕ ಸಂದರ್ಶ, ಹಾಗೂ ಮನ್ಮೂಲ್ ನಿರ್ದೇಶಕ ಎಂ.ಕೆ.ಹರೀಶ್ ಬಾಬು ಅವರನ್ನ ಎಂ.ಎಚ್.ಚನ್ನೇಗೌಡ ವಿದ್ಯಾ ಸಂಸ್ಥೆಯಿಂದ ಅಭಿನಂದಿಸಿ ಗೌರವಿಸಲಾಯಿತು.ಈ ವೇಳೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ .ಚಂದು, ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆಯ ಅಧ್ಯಕ್ಷ ಎಂ.ಸ್ವರೂಪ್‌ಚಂದ್, ಕಾರ್ಯದರ್ಶಿ ಸಿ.ಅಪೂರ್ವ ಚಂದ್ರ, ನಿರ್ದೇಶಕರಾದ ಮಲ್ಲಿಕಾರ್ಜುನ್, ಎಂ.ಎ.ರಾಮಲಿಂಗಯ್ಯ, ಇನ್ನರ್‌ವ್ಹೀಲ್ ಅಧ್ಯಕ್ಷೆ ಶ್ವೇತಾ, ರೋಟರಿ ಕ್ಲಬ್ ಅಧ್ಯಕ್ಷ ಎಸ್.ಪಿ.ಶ್ರೀನಿವಾಸ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಉಮಾಶಂಕರ್, ಕಾವೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿಕುಮಾರ್, ಕಲ್ಪತರು ಸಹಕಾರ ಸಂಘದ ಅಧ್ಯಕ್ಷ ಕಲಾವತಿ, ಪ್ರಾಂಶುಪಾಲರಾದ ಡಾ.ಎಸ್.ಪಿ.ಕಿರಣ್, ಯು.ಎಸ್.ಶಿವಕುಮಾರ್, ಮುಖ್ಯ ಶಿಕ್ಷಕರಾದ ಎನ್.ಕೃಷ್ಣ , ಎಚ್.ಬಿ.ಮಹೇಶ್, ಎಂ.ಟಿ. ಚಂದ್ರಶೇಖರ್, ಕೆ.ಎನ್. ವರದರಾಜು, ಸೇರಿದಂತೆ ಇತರರು ಹಾಜರಿದ್ದರು.