ಸಾರಾಂಶ
ಸಮಾಜದ ಪರಿವರ್ತನೆಗಾಗಿ ಸಮಾಜ ಕಾರ್ಯದಿಂದ ನಿರಂತರವಾಗಿ ಒಂದಿಲ್ಲೊಂದು ಒಳ್ಳೆಯ ಕೆಲಸ ಮಾಡುವುದರಿಂದ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತಿದೆ ಎಂದು ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕೌಲಗಿ ಹೇಳಿದರು. ಯಾದಗಿರಿ ಸರಕಾರಿ ಪದವಿ ಮಹಾವಿದ್ಯಾಲಯದ ಸಮಾಜ ಕಾರ್ಯ ವಿಭಾಗದಿಂದ ಕೊಯಿಲೂರ ಗ್ರಾಮದಲ್ಲಿ ಆಯೋಜಿಸಿದ್ದ ಸಮಾಜಕಾರ್ಯ ಗ್ರಾಮೀಣ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡಪ್ರಭ ವಾರ್ತೆ ಯಾದಗಿರಿ
ಸಮಾಜದ ಪರಿವರ್ತನೆಗಾಗಿ ಸಮಾಜ ಕಾರ್ಯದಿಂದ ನಿರಂತರವಾಗಿ ಒಂದಿಲ್ಲೊಂದು ಒಳ್ಳೆಯ ಕೆಲಸ ಮಾಡುವುದರಿಂದ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತಿದೆ ಎಂದು ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕೌಲಗಿ ಹೇಳಿದರು. ಯಾದಗಿರಿ ಸರಕಾರಿ ಪದವಿ ಮಹಾವಿದ್ಯಾಲಯದ ಸಮಾಜ ಕಾರ್ಯ ವಿಭಾಗದಿಂದ ಕೊಯಿಲೂರ ಗ್ರಾಮದಲ್ಲಿ ಆಯೋಜಿಸಿದ್ದ ಸಮಾಜಕಾರ್ಯ ಗ್ರಾಮೀಣ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜದಲ್ಲಿನ ಲೋಪ ದೋಷಗಳನ್ನು ಸರಿಪಡಿಸುವುದು ಮತ್ತು ಗ್ರಾಮೀಣ ಪ್ರದೇಶಲ್ಲಿ ಹಾಸು ಹೊಕ್ಕಾಗಿರುವ ಮೂಢನಂಬಿಕೆ, ಅಂಧಶ್ರದ್ಧೆ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಪ್ರಬುದ್ದ ಸಮಾಜ ನಿರ್ಮಾಣ ಮಾಡುವಲ್ಲಿ ಸಮಾಜ ಕಾರ್ಯ ವಿದ್ಯಾರ್ಥಿಗಳ ಪಾತ್ರ ಬಹಳ ಮಹತ್ವದ್ದು. ಈ ಹಿನ್ನೆಲೆಯಲ್ಲಿ ಸಮಾಜಕಾರ್ಯ ವಿಭಾಗ ಶಿಬಿರಾರ್ಥಿಗಳು 7 ದಿನಗಳ ಕಾಲ ಗ್ರಾಮೀಣ ಪರಿಸರದಲ್ಲಿ ಇದ್ದು ಪ್ರಾಯೋಗಿಕ ಅಧ್ಯಯನ ಮಾಡುವುದು ಅವಶ್ಯಕ ಎಂದು ನುಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ಉಮೇಶ ತೇಜಪ್ಪ, ಸಮಾಜಕಾರ್ಯ ಎಂಬುದು ವಿದ್ಯಾರ್ಥಿಗಳಿಗೆ ಶಿಬಿರ ಪ್ರಾಯೋಗಿಕ ಕಲಿಕೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಒಂದು ಉತ್ತಮ ವೇದಿಕೆಯಾಗಿದೆ. ಜೊತೆಗೆ ಸಮಾಜ ಕಾರ್ಯ ವಿದ್ಯಾರ್ಥಿಗಳಿಗೆ ಮಾನವ ಸಮಾಜವವೇ ಪ್ರಾಯೋಗಿಕ ಅಧ್ಯಯನ ಕ್ಷೇತ್ರವಾಗಿರುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿಯೇ ಕೆಲಸ ಮಾಡುವ ಅವಕಾಶಗಳು ಹೆಚ್ಚಿದ್ದು, ಗ್ರಾಮೀಣ ಜನರ ಜೀವನಮಟ್ಟವನ್ನು ಅರಿತುಕೊಳ್ಳಲು ಪ್ರಯತ್ನಿಸಬೇಕು ಎಂದು ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು.ಸಮಾರಂಭದಲ್ಲಿ ಪದವಿ ಮಹಾವಿದ್ಯಾಲಯದ ನೋಡಲ್ ಅಧಿಕಾರಿಗಳಾದ ಪಂಪಾಪತಿರೆಡ್ಡಿ, ಸಹ ಪ್ರಾಧ್ಯಾಪಕರಾದ ಡಾ.ಮೋನಯ್ಯ ಕಲಾಲ್, ಶಾಲಾ ಮುಖ್ಯ ಗುರುಗಳಾದ ಸುನಂದಾ, ಹಿರಿಯ ಶಿಕ್ಷಕರಾದ ಶಿಲ್ಪಾ ಬಿರೆದಾರ, ಸಮಾಜಕಾರ‍್ಯ ಗ್ರಾಮೀಣ ಶಿಬಿರದ ನಿರ್ದೇಶಕ ಡಾ.ಸಿ.ಆರ್. ಕಂಬಾರ್, ಶೆಟ್ಟಿಕೇರಾ ಹಾಗೂ ಉಪನ್ಯಾಸಕರು ಸೇರಿದಂತೆ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
;Resize=(128,128))
;Resize=(128,128))