ಇಲ್ಲಿಗೆ ಸಮೀಪದ ಪಾರಾಣೆ ಕೊಣಂಜಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲಮುರಿ ಗ್ರಾಮದ ಮೇಡತನ ಕುಟುಂಬಸ್ಥರ ಐನ್ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಶಾಸಕ ಎಸ್. ಪೊನ್ನಣ್ಣ ಅವರು ತಮ್ಮ ಅನುದಾನದಡಿ ಅಭಿವೃದ್ಧಿಪಡಿಸಿದ್ದು, ಇದಕ್ಕೆ ಪ್ರತಿಯಾಗಿ ಮೇಡತನ ಕುಟುಂಬಸ್ಥರು ಶಾಸಕರನ್ನು ಸನ್ಮಾನಿಸಿದರು. ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ ಹದಗೆಟ್ಟ ಸ್ಥಿತಿಯಲ್ಲಿದ್ದ ಈ ಸಂಪರ್ಕ ರಸ್ತೆಯನ್ನು ದುರಸ್ತಿಗೊಳಿಸಿ ಅಭಿವೃದ್ಧಿಪಡಿಸುವಂತೆ ಮೇಡತನ ಕುಟುಂಬಸ್ಥರು ಈ ಹಿಂದೆ ಶಾಸಕ ಎಸ್. ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದ್ದರು.
ನಾಪೋಕ್ಲು: ಇಲ್ಲಿಗೆ ಸಮೀಪದ ಪಾರಾಣೆ ಕೊಣಂಜಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲಮುರಿ ಗ್ರಾಮದ ಮೇಡತನ ಕುಟುಂಬಸ್ಥರ ಐನ್ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಶಾಸಕ ಎಸ್. ಪೊನ್ನಣ್ಣ ಅವರು ತಮ್ಮ ಅನುದಾನದಡಿ ಅಭಿವೃದ್ಧಿಪಡಿಸಿದ್ದು, ಇದಕ್ಕೆ ಪ್ರತಿಯಾಗಿ ಮೇಡತನ ಕುಟುಂಬಸ್ಥರು ಶಾಸಕರನ್ನು ಸನ್ಮಾನಿಸಿದರು. ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ ಹದಗೆಟ್ಟ ಸ್ಥಿತಿಯಲ್ಲಿದ್ದ ಈ ಸಂಪರ್ಕ ರಸ್ತೆಯನ್ನು ದುರಸ್ತಿಗೊಳಿಸಿ ಅಭಿವೃದ್ಧಿಪಡಿಸುವಂತೆ ಮೇಡತನ ಕುಟುಂಬಸ್ಥರು ಈ ಹಿಂದೆ ಶಾಸಕ ಎಸ್. ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಕುಟುಂಬಸ್ಥರ ಬೇಡಿಕೆಗೆ ತ್ವರಿತವಾಗಿ ಸ್ಪಂದಿಸಿದ ಶಾಸಕರು, ತಮ್ಮ ಅನುದಾನದ ಮೂಲಕ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಬೊಳ್ಳಂಡ ಶರಿ, ಪಾರಣೆ ವಲಯ ಅಧ್ಯಕ್ಷ ಬೊಳ್ಳಂಡ ದಿಲೀಪ್, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಬಲ್ಯಾಟಂಡ ಕೌಶಿಕ್ ಕುಟ್ಟಯ್ಯ, ಮೇಡತನ ಕುಟುಂಬಸ್ಥರಾದ ಮಹೇಶ್, ಶಿವರಾಂ ಸೇರಿದಂತೆ ಗ್ರಾಮಸ್ಥರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.