20 ವರ್ಷಗಳಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತ: ಹಾಸನದ ಕಾಂಗ್ರೆಸ್ ಕಾರ್ಯದರ್ಶಿ ಶಾಂತಕೃಷ್ಣ

| Published : Apr 25 2024, 01:08 AM IST

20 ವರ್ಷಗಳಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತ: ಹಾಸನದ ಕಾಂಗ್ರೆಸ್ ಕಾರ್ಯದರ್ಶಿ ಶಾಂತಕೃಷ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅಭ್ಯರ್ಥಿ ಶ್ರೇಯಸ್ ಪಟೇಲ್ ರವರನ್ನು ಜಯಶೀಲರನ್ನಾಗಿ ಮಾಡಿ ಜಿಲ್ಲೆಯ ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಕಸಬಾ ವಿಎಸ್‌ಎಸ್‌ಎನ್‌ ಅಧ್ಯಕ್ಷ ಹಾಗೂ ಹಾಸನ ಜಿಲ್ಲೆ ಕಾಂಗ್ರೆಸ್ ಕಾರ್ಯದರ್ಶಿ ಶಾಂತಕೃಷ್ಣ ಮನವಿ ಮಾಡಿದರು. ಆಲೂರಲ್ಲಿ ಮನೆಗಳಿಗೆ ತೆರಳಿ ಮತಯಾಚನೆ ಸಂದರ್ಭದಲ್ಲಿ ಮಾತನಾಡಿದರು.

ಮನೆ ಮನೆಗೆ ತೆರಳಿ ಮತಯಾಚನೆ

ಕನ್ನಡಪ್ರಭ ವಾರ್ತೆ ಆಲೂರು

ಸುಮಾರು ೨೦ ವರ್ಷಗಳಿಂದ ಜಿಲ್ಲೆಯ ಅಭಿವೃದ್ಧಿ ಕುಂಟುತ್ತ ಸಾಗಿರುವುದರಿಂದ ಜನಸಾಮಾನ್ಯರು ಜಿಲ್ಲೆಯಲ್ಲಿ ರಾಜಕೀಯ ಬದಲಾವಣೆ ಬಯಸಿದ್ದಾರೆ. ಏ.೨೬ ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅಭ್ಯರ್ಥಿ ಶ್ರೇಯಸ್ ಪಟೇಲ್ ರವರನ್ನು ಜಯಶೀಲರನ್ನಾಗಿ ಮಾಡಿ ಜಿಲ್ಲೆಯ ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಕಸಬಾ ವಿಎಸ್‌ಎಸ್‌ಎನ್‌ ಅಧ್ಯಕ್ಷ ಹಾಗೂ ಹಾಸನ ಜಿಲ್ಲೆ ಕಾಂಗ್ರೆಸ್ ಕಾರ್ಯದರ್ಶಿ ಶಾಂತಕೃಷ್ಣ ಮನವಿ ಮಾಡಿದರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆಗಳಿಗೆ ತೆರಳಿ ಮತಯಾಚನೆ ಸಂದರ್ಭದಲ್ಲಿ ಮಾತನಾಡಿ, ಸುಮಾರು ಎರಡೂವರೆ ದಶಕಗಳಿಂದ ಜಿಲ್ಲೆ ಅಭಿವೃಧ್ದಿಯಲ್ಲಿ ಕುಂಟುತ್ತ ಸಾಗಿದೆ. ಜಿಲ್ಲೆಯ ಬಹುತೇಕ ಮತದಾರರು ಸದ್ಯ ರಾಜಕೀಯ ಬದಲಾವಣೆ ಬಯಸಿದ್ದಾರೆ ಎಂದರು.

ತಾಲೂಕು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಎಸ್.ಎಸ್.ಶಿವಮೂರ್ತಿ ಮಾತನಾಡಿ, ಅಭ್ಯರ್ಥಿ ಶ್ರೇಯಸ್ ಪಟೇಲ್ ಮಾಜಿ ಸಂಸದ ಜಿ. ಪುಟ್ಟಸ್ವಾಮಿಗೌಡರ ಮೊಮ್ಮಗರಾಗಿದ್ದಾರೆ. ಜಿ.ಪುಟ್ಟಸ್ವಾಮಿಗೌಡರು ಸಂಸದರಾಗಿದ್ದ ಸಂದರ್ಭದಲ್ಲಿ ಜಿಲ್ಲೆಗೆ ಅಭಿವೃದ್ಧಿ ಕೆಲಸಗಳನ್ನು ಮಾಡಿರುವುದು ಇಂದಿಗೂ ಜೀವಂತವಾಗಿದೆ. ಶ್ರೇಯಸ್ ಪಟೇಲ್ ಅತ್ಯಂತ ಸರಳಜೀವಿಯಾಗಿದ್ದು, ಪ್ರತಿಯೊಬ್ಬರ ಸಮಸ್ಯೆಗಳಿಗೆ ಸ್ಪಂದಿಸುವ ವ್ಯಕ್ತಿಯಾಗಿದ್ದಾರೆ. ಇವರ ಗೆಲುವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಾದ ಅಸ್ಲಂಪಾಷ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ಹೆಮ್ಮಿಗೆ ಮೋಹನ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಲಿಂಗರಾಜ್, ತಾಲೂಕು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಎಸ್.ಎಸ್.ಶಿವಮೂರ್ತಿ, ಮಾಜಿ ಅಧ್ಯಕ್ಷ ಜಿ.ಆರ್. ರಂಗನಾಥ್, ಪಟ್ಟಣ ಪಂಚಾಯಿತಿ ಸದಸ್ಯೆ ತಾಹಿರಬೇಗಂ, ವಕೀಲ ಬಿ.ಮಂಜೇಗೌಡ, ಜಯಕುಮಾರ್ ಹೊಸೂರು, ತಾ.ಪಂ. ಮಾಜಿ ಸದಸ್ಯ ರಂಗೇಗೌಡ, ಸರ್ವರ್ ಪಾಷ, ಖಾಲೀದ್ ಪಾಷ, ಕಬೀರ್ ಅಹಮದ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಣ್ಣ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ಆಲೂರು ಬಿಜೆಪಿ ಕಾರ್ಯಕರ್ತ ಅಸ್ಲಂಪಾಷ ಆಲೂರು ಪಟ್ಟಣ ಪಂಚಾಯಿತಿ ಸದಸ್ಯೆ ತಾಹಿರಾ ಬೇಂಗಂ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.