ಸದಸ್ಯರ ಸಹಕಾರದಿಂದ ಪಟ್ಟಣದ ಅಭಿವೃದ್ಧಿ: ಮ್ಯಾಗೇರಿ

| Published : Sep 15 2024, 01:56 AM IST

ಸದಸ್ಯರ ಸಹಕಾರದಿಂದ ಪಟ್ಟಣದ ಅಭಿವೃದ್ಧಿ: ಮ್ಯಾಗೇರಿ
Share this Article
  • FB
  • TW
  • Linkdin
  • Email

ಸಾರಾಂಶ

ಕುಡಿವ ನೀರು, ಸ್ವಚ್ಛತೆ, ತರಕಾರಿ ಮಾರುಕಟ್ಟೆ ಸಮಸ್ಯೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸರ್ವ ಸದಸ್ಯರ ಸಹಕಾರ

ಗಜೇಂದ್ರಗಡ: ಪಟ್ಟಣದ ಸರ್ವಾಂಗೀಣ ಅಭಿವೃದ್ಧಿ ಪುರಸಭೆ ಸರ್ವ ಸದಸ್ಯರ ಹಾಗೂ ಅಧಿಕಾರಿಗಳ ಸಹಕಾರ ಪಡೆದು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಹೇಳಿದರು.

ಪಟ್ಟಣದ ಪುರಸಭೆಯಲ್ಲಿ ಅಧ್ಯಕ್ಷರ ನೂತನ ಕೊಠಡಿಯಲ್ಲಿ ಪೂಜಾ ಕಾರ್ಯಕ್ರಮ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಪಟ್ಟಣದ ಅಭಿವೃದ್ಧಿ ದೃಷ್ಠಿಯಿಂದ ಕೆಲ ನಿರ್ಧಾರ ಕೈಗೊಳ್ಳುವುದು ಅನಿವಾರ್ಯವಾಗಿತ್ತು. ಹೀಗಾಗಿ ವಾರ್ಡ್‌ನ ಜನರ ಮತ್ತು ಪಟ್ಟಣದ ಅಭಿವೃದ್ಧಿಗಾಗಿ ನನ್ನದೆಯಾದ ಕಲ್ಪನೆ ಹೊಂದಿದ್ದೇನೆ. ಯೋಜನೆಗಳನ್ನು ಶೀಘ್ರಗತಿಯಲ್ಲಿ ಅನುಷ್ಠಾನಕ್ಕೆ ತರಲು ಶಾಸಕ ಜಿ.ಎಸ್. ಪಾಟೀಲ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು. ಅಲ್ಲದೆ ಪಟ್ಟಣದ ೨೩ ವಾರ್ಡ್‌ಗಳಲ್ಲಿ ಕುಡಿವ ನೀರು, ಸ್ವಚ್ಛತೆ, ತರಕಾರಿ ಮಾರುಕಟ್ಟೆ ಸಮಸ್ಯೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸರ್ವ ಸದಸ್ಯರ ಸಹಕಾರ, ಸಲಹೆ ಪಡೆದು ಪ್ರಾಮಾಣಿಕ ಕೆಲಸ ನಿರ್ವಹಿಸುತ್ತೇನೆ ಎಂದರು.

ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ, ಪುರಸಭೆ ಉಪಾಧ್ಯಕ್ಷೆ ಸವಿತಾ ಬಿದರಳ್ಳಿ, ಸದಸ್ಯರಾದ ಮುರ್ತುಜಾ ಡಾಲಾಯತ, ಶಿವರಾಜ ಘೋರ್ಪಡೆ, ಮುದಿಯಪ್ಪ ಮುಧೋಳ, ರಾಜು ಸಾಂಗ್ಲೀಕರ, ಶರಣಪ್ಪ ಉಪ್ಪಿನಬೆಟಗೇರಿ, ವೆಂಕಟೇಶ ಮುದಗಲ್, ಮುತ್ತಣ್ಣ ಮ್ಯಾಗೇರಿ, ರಫೀಕ್ ತೋರಗಲ್, ವಿಜಯಾ ಮಳಗಿ, ಕೌಸರಬಾನು ಹುನಗುಂದ ಹಾಗೂ ದುರಗಪ್ಪ ಮುಧೋಳ, ಎಂ.ವೈ. ಮುಧೋಳ, ಗುಲಾಂ ಹುನಗುಂದ, ಸಿದ್ದಣ್ಣ ಚೋಳಿನ ಸೇರಿದಂತೆ ಇತರರು ಇದ್ದರು.