ಉದ್ಯೋಗ ಖಾತ್ರಿಯಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ

| Published : Jul 09 2025, 12:19 AM IST

ಸಾರಾಂಶ

ನೆಲ್ಲಿಹಂಕಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 7 ಗ್ರಾಮಗಳು ಒಳಪಡಲಿವೆ. 841 ಕುಟುಂಬಗಳನ್ನು ಹೊಂದಿದೆ. ಈ ಗ್ರಾಪಂನಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ 482 ಜನ ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 275 ಕುಟುಂಬಗಳು ಮಾತ್ರ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ ಎಂದು ಗ್ರಾಪಂ ಅಧ್ಯಕ್ಷ ಜಿ.ಎ. ದಿನೇಶ್ ಹೇಳಿದ್ದಾರೆ.

- ನೆಲ್ಲಿಹಂಕಲು ಗ್ರಾಮಸಭೆಯಲ್ಲಿ ಗ್ರಾಪಂ ಅಧ್ಯಕ್ಷ ಜಿ.ಎ. ದಿನೇಶ್ ಅಭಿಮತ

- - -

ಕನ್ನಡಪ್ರಭ ವಾರ್ತೆ ಚನ್ನಗಿರಿ

ನೆಲ್ಲಿಹಂಕಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 7 ಗ್ರಾಮಗಳು ಒಳಪಡಲಿವೆ. 841 ಕುಟುಂಬಗಳನ್ನು ಹೊಂದಿದೆ. ಈ ಗ್ರಾಪಂನಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ 482 ಜನ ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 275 ಕುಟುಂಬಗಳು ಮಾತ್ರ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ ಎಂದು ಗ್ರಾಪಂ ಅಧ್ಯಕ್ಷ ಜಿ.ಎ. ದಿನೇಶ್ ಹೇಳಿದರು.

ತಾಲೂಕಿನ ಉಬ್ರಾಣಿ ಹೋಬಳಿಯ ನೆಲ್ಲಿಹಂಕಲು ಗ್ರಾಮದ ಶ್ರೀ ಸೇವಾಲಾಲ್ ದೇವಸ್ಥಾನ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ನರೇಗಾ ಯೋಜನೆಯಡಿ ಹೆಚ್ಚು ಕುಟುಂಬಗಳು ನೋಂದಾವಣಿ ಮಾಡಿಕೊಂಡು ಕಾರ್ಯನಿರ್ವಹಿಸಿದರೆ ಇನ್ನು ಹೆಚ್ಚು ಕಾಮಗಾರಿಗಳನ್ನು ಕೈಗೊಂಡು ಗ್ರಾಮಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂದರು.

ತಾಲೂಕು ಲೆಕ್ಕ ಪರಿಶೋಧನಾ ತಂಡದ ವ್ಯವಸ್ಥಾಪಕ ಜೆ.ಎಂ. ಕೊಟ್ರೇಶ್ ಮಾತನಾಡಿ, 2024-25ನೇ ಸಾಲಿನ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಮುದಾಯ ಮತ್ತು ವೈಯಕ್ತಿಕ ಕಾಮಗಾರಿ ಹಾಗೂ 15ನೇ ಹಣಕಾಸು ಆಯೋಗ ಮತ್ತು 4ನೇ ರಾಜ್ಯ ಹಣಕಾಸು ಯೋಜನೆಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ 77, ತೋಟಗಾರಿಕಾ ಇಲಾಖೆಯಿಂದ 12 ಹೀಗೆ 89 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದಕ್ಕಾಗಿ ₹73.15 ಲಕ್ಷವನ್ನು ಪಾವತಿ ಮಾಡಿರುವ ಬಗ್ಗೆ ಗ್ರಾಮ ಸಭೆಯಲ್ಲಿ ವರದಿ ಮಂಡಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರುದ್ರೇಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಪಂ ಉಪಾಧ್ಯಕ್ಷೆ ಸುಮಾ, ಅಭಿವೃದ್ಧಿ ಅಧಿಕಾರಿ ಪವಿತ್ರ ಬಣಕರ್, ತೋಟಗಾರಿಕಾ ಸಹಾಯಕ ಅಧಿಕಾರಿ ಶ್ರೀನಿವಾಸ್, ಗ್ರಾಪಂ ಸದಸ್ಯರಾದ ಮಂಜುನಾಥ್, ರುದ್ರನಾಯ್ಕ್, ಅನಸೂಯಮ್ಮ, ಪ್ರೇಮಾ, ಚಂದ್ರಪ್ಪ, ಅನಸೂಯಾ ಬಾಯಿ, ಕಾರ್ಯದರ್ಶಿ ಲಿಂಗರಾಜ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

- - -

-8ಕೆಸಿಎನ್‌ಜಿ1: ಗ್ರಾಮಸಭೆಯನ್ನು ಗ್ರಾಪಂ ಅಧ್ಯಕ್ಷ ಜಿ.ಎ. ದಿನೇಶ್ ಉದ್ಘಾಟಿಸಿದರು.