ಕಾಂಗ್ರೆಸ್‌ ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತ

| Published : Apr 28 2024, 01:16 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಅಥಣಿ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ದುಡಿಯುವ ಜನರನ್ನು ಸೋಮಾರಿಯನ್ನಾಗಿ ಮಾಡಿವೆ. ಬಸವಣ್ಣನವರ ಕಾಯಕ ಮಂತ್ರ ರೂಢಿಸಿಕೊಂಡಿದ್ದ ಜನರು ಇಂದು ಸರ್ಕಾರದ ಮುಂದೆ ಕೈ ಒಡ್ಡುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗುತ್ತಿದೆ ಎಂದು ಬಿಜೆಪಿ ಮುಖಂಡ ಸಂಪತಕುಮಾರ್ ಶೆಟ್ಟಿ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಅಥಣಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ದುಡಿಯುವ ಜನರನ್ನು ಸೋಮಾರಿಯನ್ನಾಗಿ ಮಾಡಿವೆ. ಬಸವಣ್ಣನವರ ಕಾಯಕ ಮಂತ್ರ ರೂಢಿಸಿಕೊಂಡಿದ್ದ ಜನರು ಇಂದು ಸರ್ಕಾರದ ಮುಂದೆ ಕೈ ಒಡ್ಡುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗುತ್ತಿದೆ ಎಂದು ಬಿಜೆಪಿ ಮುಖಂಡ ಸಂಪತಕುಮಾರ್ ಶೆಟ್ಟಿ ಆರೋಪಿಸಿದರು.ಪಟ್ಟಣದ ಸಂಸ್ಕೃತ ಬಡಾವಣೆ ಮತ್ತು ಹುಡುಕೋ ಕಾಲೋನಿಯ ಬೂತ್‌ಗಳಲ್ಲಿ ಮನೆಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರ ಮತ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಯ ಹಿತ ದೃಷ್ಟಿಯಿಂದ ಪ್ರಧಾನಿ ಮೋದಿ ಅವರನ್ನು ಗೆಲ್ಲಿಸಬೇಕು. ಆದ್ದರಿಂದ ಮತದಾರರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಕೋರಿದರು.

ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಲೂಟಿಯಾಗಿದ್ದು, ಅಭಿವೃದ್ಧಿಗೆ ದುಡ್ಡಿಲ್ಲದೆ ಅನೇಕ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ. ಇಂತಹ ಗ್ಯಾರಂಟಿ ಯೋಜನೆಗಳನ್ನು ನಂಬಿ ಮತದಾರರು ಮೋಸ ಹೋಗಬಾರದು. ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಆಡಳಿತವನ್ನು ನೀಡುವ ಮೂಲಕ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ಸದೃಢ ಹಾಗೂ ಸಮೃದ್ಧ ಭಾರತವನ್ನು ಕಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ಅನೇಕ ಯೋಜನೆಗಳನ್ನು ರೂಪಿಸಿದ್ದಾರೆ. ಜಗತ್ತಿನ ಅನೇಕ ರಾಷ್ಟ್ರಗಳು ಇಂದು ಭಾರತದ ತಿರುಗಿ ನೋಡುವಂತಾಗಿದೆ. ರಾಷ್ಟ್ರದ ಅಭಿವೃದ್ಧಿ ಮತ್ತು ದೇಶದ ಜನತೆಯ ಸುರಕ್ಷತೆಯ ದೃಷ್ಟಿಯಿಂದ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರನ್ನ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಥಣಿ ಮಂಡಲ ಬಿಜೆಪಿ ಅಧ್ಯಕ್ಷ ಡಾ.ರವಿ ಸಂಕ, ಗೀತಾ ತೋರಿ, ವಿನಯ ಪಾಟೀಲ, ಮಹಾಂತೇಶ ಮಾಳಿ, ಮಹಾಂತೇಶ ಇರಳೆ, ಸ್ವಾಗತ ತೋರಿ, ನಾರಾಯಣ್ ಭೋಸಲೆ, ಅಮೃತ ಮಹಾಜನ, ರವಿ ಹಿರೇಮಠ, ಅಭಯ ಸಗರೆ, ಜಯದೇವ ಯಲ್ಲಟ್ಟಿ, ಚಂದ್ರು ನಾಯಿಕ, ಸತೀಶ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು