ಸಾರಾಂಶ
ಸೆ.2ರಿಂದ 25ರವರೆಗೆ ಈ ಅಭಿಯಾನ ನಡೆಯಲಿದ್ದು, ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡಬೇಕು.
ಕನ್ನಡಪ್ರಭ ವಾರ್ತೆ ಶಹಾಪುರ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೇಸರಗೊಂಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಹೇಳಿದರು.ನಗರದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಸದಸ್ಯತ್ವ ಅಭಿಯಾನದ ಮಂಡಲ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಸೆ.2ರಿಂದ 25ರವರೆಗೆ ಈ ಅಭಿಯಾನ ನಡೆಯಲಿದ್ದು, ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡಬೇಕು. ಸದಸ್ಯತ್ವ ಅಭಿಯಾನವನ್ನು ಪಕ್ಷದ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಬೇಕು ಎಂದರು.
ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ್ ಯಾಳಗಿ ಮಾತನಾಡಿ, ವಿದ್ಯಾರ್ಥಿ ಸಮುದಾಯ, ಯುವ ಪೀಳಿಗೆ, ಮಾತ್ರವಲ್ಲದೇ ಸಮಾಜದ ಎಲ್ಲಾ ಸಮುದಾಯ, ವರ್ಗದ ಹಾಗೂ ವಿಶೇಷವಾಗಿ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಸದಸ್ಯರನ್ನಾಗಿಸುವ ಮೂಲಕ ಈ ಅಭಿಯಾನ ಸರ್ವವ್ಯಾಪಿ ಸರ್ವಸ್ಪರ್ಶಿಯಾಗುವಂತೆ ಕೆಲಸ ಮಾಡಬೇಕೆಂದರು.ಗ್ರಾಮೀಣ ಮಂಡಲ ಅಧ್ಯಕ್ಷ ತಿರುಪತಿ ಹತ್ತಿಕಟಿಗಿ, ರಾಜುಗೌಡ ಪಾಟೀಲ್ ಉಕ್ಕಿನಾಳ, ಪಕ್ಷದ ಹಿರಿಯ ಮುಖಂಡರಾದ ಬಸವರಾಜಗೌಡ ವಿಭೂತಿಹಳ್ಳಿ, ಮಲ್ಲಿಕಾರ್ಜುನ ಕಂದಕೂರ, ಅಡಿವೆಪ್ಪ ಜಾಕಾ ಸೇರಿದಂತೆ ಶಹಾಪುರ ನಗರ ಮತ್ತು ಗ್ರಾಮೀಣ ಮಂಡಲ ಪ್ರಧಾನ ಕಾರ್ಯದರ್ಶಿಗಳು, ಸದಸ್ಯತ್ವ ಅಭಿಯಾನದ ತಂಡ, ಪಕ್ಷದ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಇದ್ದರು.