ಮಾ.14ರಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಸಿ ಫಾರಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಹಾಗೂ ವಿಕಲಚೇತನರಿಗೆ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಬೇಕು ಮನವಿ ಮಾಡಿದರು.
ಪಾಂಡವಪುರ: ಕೇಂದ್ರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮಂತ್ರಿಯಾದ ಬಳಿಕ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಇದರಿಂದಾಗಿ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ ಎಂದು ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್ ಹೇಳಿದರು. ತಾಲೂಕಿನ ಜಕ್ಕನಹಳ್ಳಿ ವೃತ್ತದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ಯರ ಸಭೆಯಲ್ಲಿ ಮಾತನಾಡಿ, ಮಾ.14ರಂದು ವಿ.ಸಿ.ಫಾರಂನಲ್ಲಿ ನಡೆಯಲಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಕಾರ್ಯಕ್ರಮಕ್ಕೆ ಈ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸುವ ಮೂಲಕ ಅಭಿವೃದ್ಧಿ ಕಾರ್ಯಕ್ಕೆ ಎಚ್ಡಿಕೆ ಅವರ ಕೈಬಲಪಡಿಸಬೇಕು ಎಂದರು. ಕಾರ್ಯಕರ್ತರ ಸಭೆ ಉದ್ಘಾಟಿಸಿದ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು, ಮಾ.14ರಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಸಿ ಫಾರಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಹಾಗೂ ವಿಕಲಚೇತನರಿಗೆ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಬೇಕು ಮನವಿ ಮಾಡಿದರು.
ಇದೇ ವೇಳೆ ಸುಂಕಾತೊಣ್ಣೂರಿನ ಪರಮೇಶ್ವರ್ ಕಾಂಗ್ರೆಸ್ ತೊರೆದು ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು. ಸಭೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್.ಎ.ಮಲ್ಲೇಶ್, ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಹೊಸಕೋಟೆ ಪುಟ್ಟಣ್ಣ, ಮುಖಂಡರಾದ ಅಶ್ವತ್ಥ್ ಕುಮಾರೇಗೌಡ, ಎಸ್.ಆನಂದ್, ಜೆ.ಪಿ.ಶಿವಶಂಕರ್, ಸುಂಕಾತೊಣ್ಣೂರು ಶಿವಕುಮಾರ್, ಶಿವಲಿಂಗಯ್ಯ ಸೇರಿ ಇತರರು ಇದ್ದರು.11ಕೆಎಂಎನ್ ಡಿ26
ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ವೃತ್ತದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಸುಂಕಾತೊಣ್ಣೂರಿನ ಪರಮೇಶ್ವರ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾದರು.