ಸಾರಾಂಶ
ಕನ್ನಡಪ್ರಭ ವಾರ್ತೆ ಮಾನ್ವಿರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಅಭಿವೃದ್ದಿಗಾಗಿ 5 ಸಾವಿರ ಕೋಟಿ ಅನುದಾನವನ್ನು ನೀಡಿದ್ದು ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡು ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದ್ದೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ ಸಿಂಗ್ ತಿಳಿಸಿದರು.ಪಟ್ಟಣದ ಭಾರತ ಜೋಡೊ ಭವನದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಬುಧವಾರ ಮಾತನಾಡಿದ ಅವರು, ರಾಯಚೂರು ಜಿಲ್ಲೆಯಲ್ಲಿ ಪಕ್ಷದ 5 ಶಾಸಕರು ಹಾಗೂ ಸಂಸದರು ಆಯ್ಕೆಯಾಗಿದ್ದರೆ. ಅವರೆಲ್ಲರೂ ಸೇರಿಕೊಂಡು ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದರು ಹೇಳಿದರು.ರಾಯಚೂರು ಸಂಸದ ಜಿ.ಕುಮಾರ ನಾಯಕ ಮಾತನಾಡಿ, ಲೋಕಸಭಾ ಚುನಾವಣೆ ನಂತರ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡುವುದಕ್ಕೆ ಅವಕಾಶ ದೊರೆತ್ತಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸುತ್ತಿದೇನೆ ಕೇಂದ್ರದಲ್ಲಿ ರಾಜ್ಯದಿಂದ ಕಾಂಗ್ರೇಸ್ ಪಕ್ಷದಿಂದ 9 ಸಂಸದರು ಮಾತ್ರ ಅಯ್ಕೆಯಾಗಿದ್ದು. ಪಕ್ಷದ ಎಲ್ಲಾ ಸಂಸದರು ಸಂಸತ್ತಿನಲ್ಲಿ ರಾಜ್ಯದ ಪ್ರತಿನಿಧಿಗಳಾಗಿ ರಾಜ್ಯದ ಹಿತಾಸಕ್ತಿಯ ಬಗ್ಗೆ ಹಾಗೂ ರಾಜ್ಯಕ್ಕೆ ಬರಬೇಕಾದ ಅನುದಾನದ ಬಗ್ಗೆ ಮುಖ್ಯಮಂತ್ರಿಗಳ ಸೂಚನೆಯಂತೆ ಸಂಸತ್ತಿನಲ್ಲಿ ಧ್ವನಿ ಎತ್ತಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಮೆಣಸಿನಕಾಯಿ ಬೆಳೆದ ರೈತರ ಸಂಕಷ್ಟಗಳ ಬಗ್ಗೆ ಕೂಡ ಕೇಂದ್ರದ ಗಮನ ಸೇಳೆಯುತ್ತಿದೇವೆ ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ನಿಕಟವಾಗಿ ಸಂಪರ್ಕ ಇಟ್ಟುಕೊಂಡು ಅವರ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುತ್ತೆನೆ ಎಂದು ತಿಳಿಸಿದರು.ಶಾಸಕ ಹಂಪಯ್ಯನಾಯಕ, ಯುವ ಮುಖಂಡರಾದ ರವಿ ಬೋಸರಾಜು.ಕೆ.ಶಾಂತಪ್ಪ,ಬಿ.ಕೆ.ಅಮರೇಶಪ್ಪ, ಶರಣಯ್ಯನಾಯಕ ಗುಡದಿನ್ನಿ ಸೇರಿದಂತೆ ಇನ್ನಿತರರು ಇದ್ದರು.------------------26ಕೆಪಿಎಂಎನ್ವಿ01: ಮಾನ್ವಿ ಪಟ್ಟಣದ ಭಾರತ ಜೋಡೊ ಭವನದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ ಸಿಂಗ್ ಸಂವಾದ ನಡೆಸಿದರು