ಸಾರಾಂಶ
ಅಭಿವೃದ್ಧಿ ಕೆಲಸಗಳೇ ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿವೆ.
ಹನುಮನಾಳದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ರಾಜ್ಯಸಭಾ ಸದಸ್ಯ
ಕನ್ನಡಪ್ರಭ ವಾರ್ತೆ ಕುಷ್ಟಗಿಅಭಿವೃದ್ಧಿ ಕೆಲಸಗಳೇ ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿವೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ತಾಲೂಕಿನ ಹನುಮನಾಳದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರಸ್ತೆ, ರೈಲ್ವೆ ಸೇರಿ ಅಭಿವೃದ್ಧಿ ಕಾಮಗಾರಿ ಮೂಲಕ ವಿಶ್ವದಲ್ಲೇ ಭಾರತ ಮುಂಚೂಣಿ ಸ್ಥಾನದಲ್ಲಿದೆ ಎಂದರು.ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹತ್ತು ವರ್ಷಗಳ ಸರ್ಕಾರದಲ್ಲಿ ಭಾರತವು ಕೈಗಾರಿಕಾ ಉತ್ಪಾದನೆ ಕ್ಷೇತ್ರದಲ್ಲಿ ಅಗ್ರಗಣ್ಯ ಸ್ಥಾನಕ್ಕೇರಿದೆ. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಮೊಬೈಲ್ ಉತ್ಪಾದನೆ ಇಲ್ಲದ ಸ್ಥಿತಿಯಿತ್ತು. ಆದರೆ ಇಂದು ವಿಶ್ವದ ಎರಡನೇ ಅತಿದೊಡ್ಡ ತಯಾರಕರಾಗಿದ್ದೇವೆ. ದುರ್ಬಲ 5ನೇ ಆರ್ಥಿಕತೆಯಿಂದ ಟಾಪ್ 5ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದೇವೆ. ಮುಂದಿನ ದಿನಗಳಲ್ಲಿ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ತಲುಪುವ ಮಟ್ಟಕ್ಕೆ ಭಾರತ ಹೊರಹೊಮ್ಮಲಿದೆ ಎಂದರು.
ಈ ಸಂದರ್ಭದಲ್ಲಿ ಕುಷ್ಟಗಿ ಬಿಜೆಪಿ ಮಂಡಲದ ಅಧ್ಯಕ್ಷ ಮಹಾಂತೇಶ ಬದಾಮಿ, ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಎಚ್. ಪಾಟೀಲ, ಶಾಸಕ ಗಾಲಿ ಜನಾರ್ದನ ರೆಡ್ಡಿ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ಸಚಿವ ಶಿವನಗೌಡ ನಾಯಕ, ಪ್ರಮುಖರಾದ ಪ್ರಭಾಕರ ಚಿಣಿ, ದೇವೇಂದ್ರಪ್ಪ ಬಳೂಟಗಿ, ಫಕೀರಪ್ಪ ವಕೀಲರು, ನಾಗಪ್ಪ ವಕೀಲರು, ಶರಣಪ್ಪ ಕುಂಬಾರ, ಪರಸಪ್ಪ ಕತ್ತಿ, ತೆವರಪ್ಪ ಚಿಕನಾಳ, ಕೆ.ಎಸ್. ಹನುಮಂತ, ಅಂದಪ್ಪ ತಳವಾರ, ಮಹಾಂತೇಶ ಗಣವಾರಿ, ಈರಣ್ಣ ಗಜೇಂದ್ರಗಡ, ನಬಿಸಾಬ ಕುಷ್ಟಗಿ, ಶಂಕರಗೌಡ ಪಾಟೀಲ ಸೇರಿದಂತೆ ಉಭಯ ಪಕ್ಷದ ಪ್ರಮುಖರು ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರಿದ್ದರು.