ಮದ್ದೂರು ತಾಲೂಕಿನಲ್ಲಿ ನೀರಾವರಿ ಕ್ಷೇತ್ರಕ್ಕೆ ಸುಮಾರು 600 ಕೋಟಿ ರು.ಗೂ ಹೆಚ್ಚಿನ ಅನುದಾನ ತಂದು ಕಾಮಗಾರಿ ಆರಂಭಿಸಲಾಗಿದೆ. ಈಗಾಗಲೇ ಹಲವು ಕಾಮಗಾರಿಗಳು ಮುಗಿದಿವೆ. ಕೆಲವೊಂದು ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ ತಾಲೂಕಿನ ಒಣ ಭೂಮಿಗೆ ನೀರುಣಿಸುವ ಕಾರ್ಯಕ್ಕೆ ಮುಂದಾಗಿದ್ದೇನೆ.
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ರೈತರ ಕಲ್ಯಾಣಕ್ಕಾಗಿ ಸರ್ಕಾರದಿಂದ ಸಾಕಷ್ಟು ಅನುದಾನ ತಂದು ತಾಲೂಕಿನಾದ್ಯಂತ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.ಸಮೀಪದ ತಿಟ್ಟಮೇಲನಹಳ್ಳಿಯಲ್ಲಿ ಕಾವೇರಿ ನೀರಾವರಿ ನಿಗಮದಿಂದ ಸುಮಾರು 35 ಲಕ್ಷ ರು. ವೆಚ್ಚದಲ್ಲಿ ಎಂಜಿಎಂ ರಸ್ತೆಯಿಂದ ತಿಟ್ಟಮೇಲನಹಳ್ಳಿ ಏತನೀರಾವರಿ ಯೋಜನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಮದ್ದೂರು ತಾಲೂಕಿನಲ್ಲಿ ನೀರಾವರಿ ಕ್ಷೇತ್ರಕ್ಕೆ ಸುಮಾರು 600 ಕೋಟಿ ರು.ಗೂ ಹೆಚ್ಚಿನ ಅನುದಾನ ತಂದು ಕಾಮಗಾರಿ ಆರಂಭಿಸಲಾಗಿದೆ. ಈಗಾಗಲೇ ಹಲವು ಕಾಮಗಾರಿಗಳು ಮುಗಿದಿವೆ. ಕೆಲವೊಂದು ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ ತಾಲೂಕಿನ ಒಣ ಭೂಮಿಗೆ ನೀರುಣಿಸುವ ಕಾರ್ಯಕ್ಕೆ ಮುಂದಾಗಿದ್ದೇನೆ ಎಂದರು.ಕೆಮ್ಮಣ್ಣು ನಾಲೆ ಆಧುನೀಕರಣ, ಸೂಳೆಕೆರೆ ಜೀರ್ಣೋದ್ಧಾರ ಸೇರಿದಂತೆ ನಾಲೆಗಳ ಆಧುನೀಕರ, ಹೆಬ್ಬಾಳ ನಾಲೆಗೆ ತಡೆಗೋಡೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಜನವರಿ ವೇಳೆ ಸೂಳೆಕೆರೆ ಜೀರ್ಣೋದ್ಧಾರ ಹಾಗೂ ನಾಲೆಗಳ ಅಭಿವೃದ್ಧಿ ಕಾಮಗಾರಿಳಿಗೆ ಚಾಲನೆ ನೀಡಲಾಗುವುದು ಎಂದರು.
ತಿಟ್ಟಮೇಲನಹಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿಯೂ ಮುಗಿಯುವ ಹಂತದಲ್ಲಿದೆ. ಇದರಿಂದ ತಾಲೂಕಿನ ಕೊನೆಭಾಗದ ರೈತರಿಗೆ ಸುಸಲಿತವಾಗಿ ಸಮರ್ಪಕವಾಗಿ ನೀರು ಒದಗಿಸಲು ಸಹಾಯವಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಭಾರತಿನಗರ ಕಾವೇರಿ ನೀರಾವರಿ ನಿಗಮದ ಎಇಇ ಪ್ರಶಾಂತ್, ಎಇ ಅವಿನಾಶ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಜಾಪ್ರಿಯ ವೆಂಕಟೇಶ್, ಮುಖಂಡರಾದ ಸಿದ್ದಲಿಂಗ ಪ್ರಸಾದ್, ಪಟೇಲ್ ಸುರೇಶ್, ಶ್ರೀನಿವಾಸ ಮೂರ್ತಿ, ಜಗದೀಶ್, ಗಿರೀಶ್, ನಾಡಗೌಡ, ಗೋವಿಂದ, ಕೃಷ್ಣ, ಕಿರಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.