ಸಹಕಾರ ಕ್ಷೇತ್ರ ರಾಜಕೀಯಕ್ಕೆ ಸೀಮಿತವಾದುದಲ್ಲ. ಜಾತಿ, ಧರ್ಮದ ಭೇದವಿಲ್ಲದೆ ಪರಸ್ಪರ ಸಹಕಾರದ ಮೂಲಕ ಸಮಾಜದ ಅಭಿವೃದ್ಧಿ ಸಾಧಿಸುವ ದೂರದೃಷ್ಟಿಯ ಚಿಂತನೆ ಸಹಕಾರ ತತ್ವದಲ್ಲಿದೆ ಎಂದು ಮಾಜಿ ಶಾಸಕ ಹಾಗೂ ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಬೆಳ್ಳಿ ಪ್ರಕಾಶ್ ಹೇಳಿದರು.
ಕನ್ನಡಪ್ರಭ ವಾರ್ತೆ ಕಡೂರು
ಸಹಕಾರ ಕ್ಷೇತ್ರ ರಾಜಕೀಯಕ್ಕೆ ಸೀಮಿತವಾದುದಲ್ಲ. ಜಾತಿ, ಧರ್ಮದ ಭೇದವಿಲ್ಲದೆ ಪರಸ್ಪರ ಸಹಕಾರದ ಮೂಲಕ ಸಮಾಜದ ಅಭಿವೃದ್ಧಿ ಸಾಧಿಸುವ ದೂರದೃಷ್ಟಿಯ ಚಿಂತನೆ ಸಹಕಾರ ತತ್ವದಲ್ಲಿದೆ ಎಂದು ಮಾಜಿ ಶಾಸಕ ಹಾಗೂ ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಬೆಳ್ಳಿ ಪ್ರಕಾಶ್ ಹೇಳಿದರು.ಪಟ್ಟಣದ ಹೊರವಲಯದಲ್ಲಿರುವ ಬಯಲುಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ವಿವಿಧ ಸಹಕಾರಿ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ''''''''ಸಹಕಾರ ಸಂಸ್ಥೆಗಳ ಮೂಲಕ ಮೌಲ್ಯವರ್ಧನೆ ಮತ್ತು ಬ್ರ್ಯಾಂಡ್ ನಿರ್ಮಾಣ ದಿನ'''''''' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಹಕಾರ ಕ್ಷೇತ್ರದ ಮೂಲ ತತ್ವಗಳಿಗೆ ಅನುಗುಣವಾಗಿ ಜಾತಿ, ಧರ್ಮ ಮೀರಿ ಕಾರ್ಯನಿರ್ವಹಿಸುತ್ತಿದ್ದೇವೆಯೇ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಕಾಲಘಟ್ಟ ಇದಾಗಿದೆ. ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ ತೃಪ್ತಿ ನನಗಿದೆ. ಕಡೂರು ತಾಲೂಕೊಂದರಲ್ಲಿಯೇ 14,250 ಕುಟುಂಬಗಳಿಗೆ ₹245 ಕೋಟಿ ಸಾಲ ವಿತರಿಸಲಾಗಿದೆ. ಮಧ್ಯಮ ವರ್ಗದವರಿಗೆ ₹160 ಕೋಟಿ ಸಾಲ ನೀಡಲಾಗಿದೆ ಎಂದು ತಿಳಿಸಿದರು.ನಾನು ಸಹಕಾರಿ ಕ್ಷೇತ್ರಕ್ಕೆ ಪ್ರವೇಶಿಸಿದ ಸಂದರ್ಭದಲ್ಲಿ ಸಿಂಗಟಗೆರೆ ಸಹಕಾರಿ ಸಂಘದ ವಾರ್ಷಿಕ ವಹಿವಾಟು ಕೇವಲ ₹80 ಸಾವಿರ ಇತ್ತು. ಇಂದು ಅದು ₹16 ಕೋಟಿಗೂ ಅಧಿಕ ವಹಿವಾಟು ನಡೆಸುತ್ತಿದೆ. ಇದು ಸಹಕಾರಿ ಕ್ಷೇತ್ರದ ಬೆಳವಣಿಗೆ ಮತ್ತು ಮಹತ್ವಕ್ಕೆ ಸಾಕ್ಷಿಯಾಗಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಯಾವುದೇ ಸಹಕಾರಿ ಸಂಘ ಅಥವಾ ಡಿಸಿಸಿ ಬ್ಯಾಂಕ್ನ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡದೆ, ಸಹಕಾರಿ ತತ್ವಗಳ ಆಧಾರದಲ್ಲಿ ಸಂಸ್ಥೆಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ. ತಾಲೂಕು ವ್ಯಾಪ್ತಿಯ ಸಹಕಾರಿ ಸಂಘಗಳ ಪುನಶ್ಚೇತನಕ್ಕೂ ಅಗತ್ಯ ಸಹಕಾರ ನೀಡಿದ್ದೇನೆ ಎಂದರು.
ಮುಂದಿನ ದಿನಗಳಲ್ಲಿ ಸಹಕಾರಿ ಕ್ಷೇತ್ರ ಹಲವು ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ. ಆದ್ದರಿಂದ ಈಗಿನಿಂದಲೇ ಸಹಕಾರಿ ಸಂಘಗಳನ್ನು ಆರ್ಥಿಕವಾಗಿ ಸದೃಢಗೊಳಿಸಿಕೊಳ್ಳಬೇಕು. ಪರಸ್ಪರ ಸಹಕಾರದ ಮೂಲಕ ನಾವು ಬೆಳೆಯುವುದರ ಜತೆಗೆ ಇತರರ ಬೆಳವಣಿಗೆಗೂ ನೆರವಾಗಬೇಕು. ಸಹಕಾರಿ ಕ್ಷೇತ್ರದಲ್ಲಿ ನನ್ನ ಸೇವೆ ನಿರಂತರವಾಗಿರಲಿದೆ ಎಂದು ಹೇಳಿದರು.ಹಾಸನ ಹಾಲು ಒಕ್ಕೂಟದ ನಿರ್ದೇಶಕ ಬಿದರೆ ಜಗದೀಶ್ ಮಾತನಾಡಿ, ಪ್ರತಿಯೊಂದು ಸಹಕಾರಿ ಸಂಘವೂ ಡಿಸಿಸಿ ಬ್ಯಾಂಕ್ ಮೂಲಕ ಹಣಕಾಸಿನ ಸೌಲಭ್ಯ ಪಡೆಯುತ್ತದೆ. ಆದರೆ ತಮ್ಮ ಠೇವಣಿಗಳನ್ನು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಇರಿಸುತ್ತಿರುವುದು ಸರಿಯಲ್ಲ. ಸಹಕಾರಿ ಸಂಘಗಳು ತಮ್ಮ ಠೇವಣಿಗಳನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಲ್ಲಿಯೇ ಇರಿಸಿದರೆ ಸಹಕಾರಿ ಕ್ಷೇತ್ರದ ಪರಸ್ಪರ ಬೆಳವಣಿಗೆಗೆ ಪೂರಕವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಉತ್ತಮ ಸಾಧನೆ ಮಾಡಿದ ಸಹಕಾರಿ ಸಂಘಗಳ ಪದಾಧಿಕಾರಿಗಳನ್ನು ಗೌರವಿಸಲಾಯಿತು.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಿ.ಕೆ.ದಿವಾಕರ, ಉಪಾಧ್ಯಕ್ಷ ಸೀಗೇಹಡ್ಲು ಹರೀಶ್, ಶಿವ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎನ್.ಬೊಮ್ಮಣ್ಣ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಿ.ನಾಯಕ್, ಸಹಕಾರ ಅಭಿವೃದ್ಧಿ ಅಧಿಕಾರಿ ಅನುಪಮಾ, ಹಾಸನ ಹಾಲು ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಸುರೇಶ್, ಅಕ್ಕನಾಗಮ್ಮ, ಸಿ.ಎಚ್.ಕುಶಕುಮಾರ್ ಸೇರಿದಂತೆ ವಿವಿಧ ಸಹಕಾರಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬ್ಯಾಂಕ್ನಲ್ಲೇ ಠೇವಣಿಗೆ ಆದೇಶಹಾಲು ಒಕ್ಕೂಟದ ಸಹಕಾರಿ ಸಂಘಗಳು ತಮ್ಮ ಠೇವಣಿಗಳನ್ನು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಇರಿಸುವ ಬದಲು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಲ್ಲಿಯೇ ಇರಿಸುವಂತೆ ಆದೇಶ ಹೊರಡಿಸುವ ಅಗತ್ಯವಿದೆ. ಎಲ್ಲ ಸಹಕಾರಿ ಸಂಘಗಳು ಸಹಕಾರಿ ಬ್ಯಾಂಕ್ಗಳ ಮೂಲಕವೇ ಹಣಕಾಸಿನ ವ್ಯವಹಾರ ನಡೆಸಬೇಕು.
- ಬೆಳ್ಳಿ ಪ್ರಕಾಶ್, ನಿರ್ದೇಶಕರು, ಅಪೆಕ್ಸ್ ಬ್ಯಾಂಕ್