ರಾಜ್ಯ ಕೆಎಂಎಫ್ ನಿರ್ದೇಶಕರಾಗಿ ದೇವಿಪ್ರಸಾದ್ ಶೆಟ್ಟಿ ಆಯ್ಕೆ

| Published : May 21 2025, 12:05 AM IST

ರಾಜ್ಯ ಕೆಎಂಎಫ್ ನಿರ್ದೇಶಕರಾಗಿ ದೇವಿಪ್ರಸಾದ್ ಶೆಟ್ಟಿ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ ನಿ. ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಆಯ್ಕೆಯಾಗಿದ್ದಾರೆ.

ಮಂಗಳೂರು: ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ ನಿ. ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕರಾಗಿರುವ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರನ್ನು ಮಂಗಳವಾರ ನಡೆದ ಒಕ್ಕೂಟದ ನೂತನ ಆಡಳಿತ ಮಂಡಳಿ ಸಭೆಯಲ್ಲಿ ರಾಜ್ಯ ಕೆಎಂಎಫ್ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಯಿತು. ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಶಿಫಾರಸ್ಸಿನ ಮೂಲಕ ಈ ಆಯ್ಕೆ ನಡೆದಿದೆ.

ಈ ಮೊದಲು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದ ಹೈನುಗಾರರ ಬಳಗದ 13 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದು, ಬಳಿಕ ಡಾ.ಎಂಎನ್ಆರ್ ಬಳಗದ ರವಿರಾಜ ಹೆಗ್ಡೆ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್. ಕೋಟ್ಯಾನ್ ಅವಿರೋಧವಾಗಿ ಆಯ್ಕೆಗೊಂಡಿದ್ದರು. ರಾಜೇಂದ್ರ ಕುಮಾರ್ ಅವರ ಶಿಫಾರಸ್ಸಿನ ಮೂಲಕ ದೇವಿಪ್ರಸಾದ್ ಶೆಟ್ಟಿ ರಾಜ್ಯ ಕೆಎಂಎಫ್ ನಿರ್ದೇಶಕರಾಗಿ ಆಯ್ಕೆಗೊಂಡಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕರಾಗಿರುವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರು ಬೆಳಪು ವ್ಯವಸಾಯ ಸೇವಾ ಸಹಕಾರ ಸಂಘ, ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಬೆಳಪು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅಭಿನಂದನೆ: ರಾಜ್ಯ ಕೆಎಂಎಫ್ ನಿರ್ದೇಶಕರಾಗಿ ಆಯ್ಕೆಯಾದ ದೇವಿಪ್ರಸಾದ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಅವರು ಆಡಳಿತ ಮಂಡಳಿ ಸಭೆಯಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಉದಯ ಎಸ್. ಕೋಟ್ಯಾನ್, ನಿರ್ದೇಶಕರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಸುಧಾಕರ್ ಶೆಟ್ಟಿ , ಎನ್.ಮಂಜಯ್ಯ ಶೆಟ್ಟಿ, ಕೆ. ಶಿವಮೂರ್ತಿ, ಸುಚರಿತ ಶೆಟ್ಟಿ, ನಂದರಾಮ್ ರೈ, ಎಸ್. ಬಿ. ಜಯರಾಮ ರೈ, ಚಂದ್ರಶೇಖರ ರಾವ್, ಎಚ್. ಪ್ರಭಾಕರ್, ಮಮತಾ ಆರ್. ಶೆಟ್ಟಿ,. ಬಿ. ಸುಧಾಕರ್ ರೈ, ಭರತ್ ಎನ್, ಸವಿತಾ ಎನ್. ಶೆಟ್ಟಿ ಇದ್ದರು.