: ಹೊರರಾಜ್ಯಗಳ ಗಡಿ ಕನ್ನಡಿಗರ ಸಮಸ್ಯೆಗಳ ಕುರಿತಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್ ಸೋಮವಾರ ವಿಧಾನಸೌಧದಲ್ಲಿ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಹೊರನಾಡಿನ ಪ್ರಮುಖರೊಂದಿಗೆ ಸಭೆ ನಡೆಸಿದರು.
ಮಂಗಳೂರು: ಹೊರರಾಜ್ಯಗಳ ಗಡಿ ಕನ್ನಡಿಗರ ಸಮಸ್ಯೆಗಳ ಕುರಿತಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್ ಸೋಮವಾರ ವಿಧಾನಸೌಧದಲ್ಲಿ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಹೊರನಾಡಿನ ಪ್ರಮುಖರೊಂದಿಗೆ ಸಭೆ ನಡೆಸಿದರು.
ಯೋಜನಾ ಇಲಾಖೆಯ ಕಾರ್ಯದರ್ಶಿ ಡಾ.ತ್ರಿಲೋಕಚಂದ್ರ ಮಾತನಾಡಿ, ಹೊರನಾಡ ಕನ್ನಡಿಗರು ದಿನ ನಿತ್ಯ ಅನುಭವಿಸುವ ಶೈಕ್ಷಣಿಕ, ಸಾಂಸ್ಕೃತಿಕ, ಔದ್ಯೋಗಿಕ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಅಪರ ಮುಖ್ಯ ಕಾರ್ಯದರ್ಶಿಗಳ ಮೂಲಕ ಮುಖ್ಯಮಂತ್ರಿಗಳ ಅವಗಾಹನೆಗೆ ತರುವುದಾಗಿ ತಿಳಿಸಿದರು. ಇವುಗಳ ಪರಿಹಾರದ ಬಗ್ಗೆ ಇಲಾಖಾವಾರು ಸಮಸ್ಯೆಗಳ ಬಗ್ಗೆ ಚರ್ಚಿಸಿ, ಕ್ರಮಕೈಗೊಳ್ಳುವಂತೆ ಗಡಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಸಮಸ್ಯೆಗಳ ವಿವರಗಳನ್ನು ಇಲಾಖಾವಾರು ಸಮಸ್ಯೆ ಮತ್ತು ಆಗಬೇಕಾಗಿರುವ ಪರಿಹಾರದ ಬಗ್ಗೆ ವಿಷಯವಾರು ಸಭೆಗೆ ಮಂಡಿಸಿದರು.ಹೊರರಾಜ್ಯಗಳ ಕನ್ನಡ ಮಾಧ್ಯಮ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಸೇರಿದಂತೆ ವಿವಿಧ ಆಗ್ರಹಗಳ ಕುರಿತು ಸಂಬಂಧಪಟ್ಟ ಇಲಾಖೆಗಳ ಕಾರ್ಯದರ್ಶಿಗಳು ಪ್ರಸ್ತಾವನೆಯನ್ನು ಆಯಾ ಇಲಾಖೆಗಳ ಮೂಲಕ ಮುಖ್ಯ ಕಾರ್ಯದರ್ಶಿಗಳ ಮತ್ತು ಮುಖ್ಯಮಂತ್ರಿಗಳ ಅವಗಾಹನೆಗೆ ತರಲು ಅಪರ ಮುಖ್ಯ ಕಾರ್ಯದರ್ಶಿ ಸೂಚಿಸಿದರು.
6 ಹೊರರಾಜ್ಯಗಳಲ್ಲಿರುವ 671 ಕನ್ನಡ ಮಾಧ್ಯಮ ಶಾಲೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿಧ್ಯಾರ್ಥಿಗಳು ಇರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಯಿತು.ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಮತ್ತಿತರರು ಭಾಗವಹಿಸಿ ಗರಿನಾಡಿನ ಕನ್ನಡಿಗರ ಜ್ವಲಂತ ಸಮಸ್ಯೆಗಳನ್ನು ಪ್ರಸ್ತಾಪಿಸಿದರು.
ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಸರ್ಕಾರದ ಹಂತದಲ್ಲಿ ಉನ್ನತ ಮಟ್ಟದ ಅಧಿಕಾರಿಗಳೊಡನೆ ಹೊರರಾಜ್ಯಗಳ ಗಡಿ ಕನ್ನಡಿಗರ ಸಮಸ್ಯೆಗಳನ್ನು ಆಲಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಲು ಉನ್ನತ ಮಟ್ಟದ ಸಭೆ ನಡೆಸಿ 3 ತಿಂಗಳಲ್ಲಿ ಈ ಬಗ್ಗೆ ಆಯಾ ಇಲಾಖೆಗಳು ಪ್ರಸ್ತಾವನೆಗಳನ್ನು ಯೋಜನಾ ಇಲಾಖೆಯ ಮತ್ತು ಮುಖ್ಯ ಕಾರ್ಯದರ್ಶಿಗಳ ಮೂಲಕ ಮುಖ್ಯಮಂತ್ರಿಗಳ ಅವಗಾಹನೆಗೆ ಮತ್ತು ಸೂಕ್ತ ಆದೇಶಕ್ಕಾಗಿ ಸಲ್ಲಿಸಲು ಸೂಚಿಸಿ, 3 ತಿಂಗಳೊಳಗಾಗಿ ಸೂಕ್ತ ತೀರ್ಮಾನ ತೆಗೆದುಕೊಂಡು ಸಲ್ಲಿಸಲು ಸೂಚಿಸಲಾಯಿತು.