ನರಿಯಂದಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಚೇಲಾವರ ಭಾಗಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಶುಕ್ರವಾರ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ನಾಪೋಕ್ಲು: ನರಿಯಂದಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಚೇಲಾವರ ಭಾಗಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಶುಕ್ರವಾರ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಮೊದಲಿಗೆ ಚೇಲಾವರ ಶಾಲೆಯ ಬಳಿ ಶಾಸಕರ ವಿಶೇಷ ಅನುದಾನದ 25 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸೇತುವೆ ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆಗೊಳಿಸಿದರು. ಬಳಿಕ ಗ್ರಾಮದ ಪ್ರಸಿದ್ಧ ಪೊನ್ನೋಲು ಶಾಸ್ತಾವು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಶಾಸಕರ ಅನುದಾನದ 5 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡ ಕಡಿಯತ್ನಡ್ ಪೊನ್ನೊಲ ಶಾಸ್ತವು ಪುದಿಯೋದಿ ದೇವಸ್ಥಾನದ ಆವರಣ ರಸ್ತೆ ಉದ್ಘಾಟಿಸಿ ಶುಭ ಹಾರೈಸಿದರು.ಇದಕ್ಕೂ ಮುನ್ನ ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡಪಾಲ ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಶಾಸಕರು, 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ (ಗುದ್ದಲಿ ಪೂಜೆ) ನೆರವೇರಿಸಿದರು. ಸ್ಥಳೀಯ ಗ್ರಾಮಸ್ಥರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಪ್ರಮುಖ ಮುಖಂಡರು ಇದ್ದರು.