ಮದ್ದೂರಿನಲ್ಲಿ ಶಿವನ ದೇಗುಲಗಳಲ್ಲಿ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಕೆ

| Published : Mar 09 2024, 01:31 AM IST

ಮದ್ದೂರಿನಲ್ಲಿ ಶಿವನ ದೇಗುಲಗಳಲ್ಲಿ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಪುರಾಣ ಪ್ರಸಿದ್ಧ ವೈದ್ಯನಾಥಪುರದ ಶ್ರೀವೈದ್ಯನಾಥೇಶ್ವರ ದೇಗುಲದಲ್ಲಿ ರುದ್ರ ಹೋಮ. ರುದ್ರಾಭಿಷೇಕ ದೊಂದಿಗೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ, ಮಳವಳ್ಳಿ ರಸ್ತೆಯ ಶ್ರೀವಿಶ್ವನಾಥ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಬೆಳಗ್ಗೆ 6 ಗಂಟೆಯಿಂದ ಮಹಾ ಗಣಪತಿ ಹೋಮ. ನವಗ್ರಹ ಹೋಮ ಹಾಗೂ ಮೃತ್ಯುಂಜಯ ಹೋಮ ನೆರವೇರಿಸಲಾಯಿತು.

ಕನ್ನಡಪ್ರಭ ವಾರ್ತೆ ಮದ್ದೂರು

ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಶಿವನ ದೇವಾಲಯಗಳಲ್ಲಿ ಶುಕ್ರವಾರ ಮಹಾ ಶಿವರಾತ್ರಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಬೆಳಗಿನಿಂದಲೇ ದೇಗುಗಳಲ್ಲಿ ವಿಶೇಷ ಪೂಜೆ ನೆರವೇರಿತು. ಅಸಂಖ್ಯಾತ ಭಕ್ತಾದಿಗಳು ದೇವಾಲಯಕ್ಕೆ ತೆರಳಿ ದರ್ಶನ ಪಡೆದು ಧನ್ಯತಾ ಭಾವ ಮೆರೆದರು. ಪಟ್ಟಣದ ಶ್ರೀಕಾಶಿವಿಶ್ವೇಶ್ವರಸ್ವಾಮಿ ದೇಗುಲದಲ್ಲಿ ಮುಂಜಾನೆಯಿಂದಲೇ ಸಾಮೂಹಿಕ ರುದ್ರ ಹೋಮ ನಂತರ ಪ್ರಥಮ ರುದ್ರಾಭಿಷೇಕ ತರುವಾಯ ಪುಷ್ಪಾಲಂಕಾರ ಸೇವೆಯೊಂದಿಗೆ ಮಹಾ ಮಂಗಳಾರತಿ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಸಂಜೆ ರುದ್ರಾಭಿಷೇಕ ದೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ ಶಂಕರ್ ಸಭಾದಿಂದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ರಾತ್ರಿ ಜಾಗರಣೆ ಅಂಗವಾಗಿ ಶೃತಿಸಾಗರ ಭಜನಾ ಮಂಡಳಿಯಿಂದ ಭಕ್ತಿಗೀತೆಗಳೊಂದಿಗೆ ವಿವಿಧ ಕಾರ್ಯಕ್ರಮಗಳು ಜರುಗಿದವು.

ಪುರಾಣ ಪ್ರಸಿದ್ಧ ವೈದ್ಯನಾಥಪುರದ ಶ್ರೀವೈದ್ಯನಾಥೇಶ್ವರ ದೇಗುಲದಲ್ಲಿ ರುದ್ರ ಹೋಮ. ರುದ್ರಾಭಿಷೇಕ ದೊಂದಿಗೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ, ಮಳವಳ್ಳಿ ರಸ್ತೆಯ ಶ್ರೀವಿಶ್ವನಾಥ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಬೆಳಗ್ಗೆ 6 ಗಂಟೆಯಿಂದ ಮಹಾ ಗಣಪತಿ ಹೋಮ. ನವಗ್ರಹ ಹೋಮ ಹಾಗೂ ಮೃತ್ಯುಂಜಯ ಹೋಮ ನೆರವೇರಿಸಲಾಯಿತು.

ಸಂಜೆ ರುದ್ರಾಭಿಷೇಕ ಪುಷ್ಪಲಂಕಾರದೊಂದಿಗೆ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ, ಜಾಗರಣೆ ಪ್ರಯುಕ್ತ ಕಲಾ ಸಾಧನ ನೃತ್ಯ ಶಾಲೆ ಚಂದನಶ್ರೀ ಮತ್ತು ಶಿಷ್ಯರಿಂದ ಭರತನಾಟ್ಯ ಪ್ರದರ್ಶನ ಮತ್ತು ಪ್ರಭಾ ಮತ್ತು ತಂಡದಿಂದ ಭಕ್ತಿ ಗೀತೆಗಳ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ತಾಲೂಕಿನ ಚಿಕ್ಕ ಅಂಕನಹಳ್ಳಿ ಶ್ರೀನಂದಿ ಬಸವೇಶ್ವರ ದೇಗುಲದಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು. ಚನ್ನೇಗೌಡನ ದೊಡ್ಡಿ ಹೊರವಲಯದ ಬಸವನಗುಡಿ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜೆ ಕಾರ್ಯಗಳು ನೆರವೇರಿದವು.

ಸೋಮನಹಳ್ಳಿಯ ಮಾದೇಶ್ವರ ದೇವಸ್ಥಾನ,ಚನ್ನೇಗೌಡ ಬಡಾವಣೆಯ ಶ್ರೀ ನಂದಿ ಬಸವೇಶ್ವರ ದೇವಾಲಯ ಸೇರಿದಂತೆ ವಿವಿಧ ಶಿವನ ದೇವಾಲಯ ಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.