ಮಾಜಿ ಶಾಸಕ ಪರಣ್ಣ ಮುನವಳ್ಳಿ ಅಂಜನಾದ್ರಿ ಬೆಟ್ಟದ ಕೆಳಗೆ ಇರುವ ಆಂಜನೇಯಸ್ವಾಮಿ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ಮಾಲೆ ವಿಸರ್ಜನೆ
ಗಂಗಾವತಿ:ಹನುಮದ್ ವ್ರತ ಆಚರಣೆ ಅಂಗವಾಗಿ ಅಂಜನಾದ್ರಿಯಲ್ಲಿ ಕಳೆದ ಎರಡು ದಿನಗಳಿಂದ ನಡೆದ ಹನುಮಾಲಾ ವಿಸರ್ಜನೆಯಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ಸಹಸ್ರಾರು ಮಾಲಾಧಾರಿಗಳು ಮಾಲೆ ವಿಸರ್ಜನೆ ಮಾಡಿದರು.
ಕಳೆದ ಐದು ದಿನಗಳಿಂದ ಹನುಮಮಾಲೆ ಧರಿಸಿದ್ದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಅಂಜನಾದ್ರಿ ಬೆಟ್ಟ ಏರಿ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಮಾಲೆ ವಿಸರ್ಜನೆ ಮಾಡಿದರು.ಈ ಸಂದರ್ಭದಲ್ಲಿ ಅರ್ಚಕರು ಶಾಸಕರಿಗೆ ಶಾಲು ಹಾಕಿ ಗೌರವಿಸಿದರು. ಮಾಜಿ ಶಾಸಕ ಪರಣ್ಣ ಮುನವಳ್ಳಿ ಅಂಜನಾದ್ರಿ ಬೆಟ್ಟದ ಕೆಳಗೆ ಇರುವ ಆಂಜನೇಯಸ್ವಾಮಿ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ಮಾಲೆ ವಿಸರ್ಜನೆ ಮಾಡಿದರು.
ಅಲ್ಲದೇ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರು ಮಾಲೆ ವಿಸರ್ಜನೆ ಮಾಡಿ ವ್ರತಾಚರಣೆಯ ಸೇವೆ ಪೂರ್ಣಗೊಳಿಸಿದರು.