ಕನಕದಾಸರ ಆದರ್ಶಮಯ ಜೀವನ, ಭಕ್ತಿ, ಸರಳತೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಅವರ ವಿಚಾರಧಾರೆಗಳನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಕನಕದಾಸರ ಬಾಲ್ಯ, ಜೀವನ ಸಾಧನೆ, ಸಾಹಿತ್ಯ ಸೇವೆ ಹಾಗೂ ಭಕ್ತಿಯ ಮಹತ್ವದ ಕುರಿತು ಮಕ್ಕಳಿಗೆ ಪರಿಚಯಿಸಲಾಯಿತು. ಅವರ ಕೀರ್ತನೆಗಳ ಮೂಲಕ ಸಮಾನತೆ, ಮಾನವೀಯತೆ, ಸಹಬಾಳ್ವೆ ಮತ್ತು ನೈತಿಕ ಮೌಲ್ಯಗಳ ಅರಿವು ಮೂಡಿಸಲಾಯಿತು.

ಹಾಸನ: ನಗರದ ದ ಸ್ಕಾಲರ್ಸ್‌ ವರ್ಲ್ಡ್ ಶಾಲೆ ಹಾಗೂ ಸ್ಕಾಲರ್ಸ್ ಇಂಟರ್‌ನ್ಯಾಷನಲ್ ಶಾಲೆಗಳಲ್ಲಿ ಶ್ರೇಷ್ಠ ಸಂತ, ಕವಿ, ದಾರ್ಶನಿಕ ಹಾಗೂ ಸಮಾಜ ಸುಧಾರಕ ಶ್ರೀ ಕನಕದಾಸರ ಜಯಂತಿಯನ್ನು ಭಕ್ತಿಭಾವ ಮತ್ತು ಸಡಗರದಿಂದ ಆಚರಿಸಲಾಯಿತು.ದ ಸ್ಕಾಲರ್ಸ್‌ ವರ್ಲ್ಡ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ಮಮತಾ ಚಂದ್ರಶೇಖರ್‌ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಪೂಜೆ ನೆರವೇರಿಸಿದರು. ಶಾಲೆಯ ಆಡಳಿತಾಧಿಕಾರಿ ಡಾ. ಎಚ್. ಎನ್. ಚಂದ್ರಶೇಖರ್‌ ಅವರು ವಿದ್ಯಾರ್ಥಿಗಳಿಗೆ ಜಯಂತಿಯ ಶುಭಾಶಯಗಳನ್ನು ತಿಳಿಸಿ, ಕನಕದಾಸರ ಆದರ್ಶಮಯ ಜೀವನ, ಭಕ್ತಿ, ಸರಳತೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಅವರ ವಿಚಾರಧಾರೆಗಳನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಕನಕದಾಸರ ಬಾಲ್ಯ, ಜೀವನ ಸಾಧನೆ, ಸಾಹಿತ್ಯ ಸೇವೆ ಹಾಗೂ ಭಕ್ತಿಯ ಮಹತ್ವದ ಕುರಿತು ಮಕ್ಕಳಿಗೆ ಪರಿಚಯಿಸಲಾಯಿತು. ಅವರ ಕೀರ್ತನೆಗಳ ಮೂಲಕ ಸಮಾನತೆ, ಮಾನವೀಯತೆ, ಸಹಬಾಳ್ವೆ ಮತ್ತು ನೈತಿಕ ಮೌಲ್ಯಗಳ ಅರಿವು ಮೂಡಿಸಲಾಯಿತು.ಇದೇ ಸಂದರ್ಭದಲ್ಲಿ ನಗರದ ಸ್ಕಾಲರ್ಸ್‌ ಇಂಟರ್‌ನ್ಯಾಷನಲ್ ಶಾಲೆಯಲ್ಲಿಯೂ ಕನಕದಾಸ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಕಾರ್ಯದರ್ಶಿ ಮಮತಾ ಚಂದ್ರಶೇಖರ್‌ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಿಕ್ಷಕರು ಕನಕದಾಸರ ಜೀವನ ಸಂದೇಶ, ಭಕ್ತಿ ಪರಾಕಾಷ್ಠೆ, ಸಮಾಜದಲ್ಲಿನ ಅಸಮಾನತೆಗಳ ವಿರುದ್ಧದ ಅವರ ಚಿಂತನೆ ಹಾಗೂ ಸಮಾನತೆಯ ಆಶಯಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಶಿಕ್ಷಕರು ಕನಕದಾಸರು ರಚಿಸಿದ ಕೀರ್ತನೆಗಳು ಮತ್ತು ಭಜನೆಗಳನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಆಧ್ಯಾತ್ಮಿಕ ಮೆರುಗು ನೀಡಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಸಂತ ಕನಕದಾಸರ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸ್ಮರಿಸಿದರು. ಕಾರ್ಯಕ್ರಮದ ಅಂತ್ಯದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಒಂದೆ ಸಂಸ್ಥೆಯ ಎರಡೂ ಶಾಲೆಗಳಲ್ಲಿ ನಡೆದ ಕಾರ್ಯಕ್ರಮಗಳ ಮೂಲಕ ಮಹನೀಯರ ಜೀವನ ಸಾಧನೆ ಮತ್ತು ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದರ ಜೊತೆಗೆ ಭಕ್ತಿ, ಸಮಾನತೆ, ವಿನಯ ಹಾಗೂ ಮಾನವೀಯತೆಯ ಸಂದೇಶವನ್ನು ಮಕ್ಕಳಲ್ಲಿ ಬೆಳೆಸುವ ಪ್ರಯತ್ನ ಮಾಡಲಾಯಿತು.