ಸಾರಾಂಶ
ರಾಮನಗರ: ವೈಕುಂಠ ಏಕಾದಶಿ ಪ್ರಯುಕ್ತ ಜಿಲ್ಲೆಯ ದೇವಾಲಯಗಳಲ್ಲಿ ಗೋವಿಂದ ನಾಮಸ್ಮರಣೆ ಶುಕ್ರವಾರ ಜೋರಾಗಿತ್ತು. ಜನರು ಏಕಾದಶಿಯನ್ನು ಉಪವಾಸವಿದ್ದು ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಿದರು.
ರಾಮನಗರ: ವೈಕುಂಠ ಏಕಾದಶಿ ಪ್ರಯುಕ್ತ ಜಿಲ್ಲೆಯ ದೇವಾಲಯಗಳಲ್ಲಿ ಗೋವಿಂದ ನಾಮಸ್ಮರಣೆ ಶುಕ್ರವಾರ ಜೋರಾಗಿತ್ತು. ಜನರು ಏಕಾದಶಿಯನ್ನು ಉಪವಾಸವಿದ್ದು ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಿದರು.
ಜಿಲ್ಲೆಯ ಐದು ತಾಲೂಕಿನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ ಮತ್ತು ವೈಷ್ಣವಾಗಮನ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಧಾರ್ಮಿಕ ವಿವಿಧ ವಿಧಾನಗಳೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗಿತ್ತು. ಶುಕ್ರವಾರ ಬೆಳಗ್ಗಿನಿಂದಲೇ ಭಕ್ತರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.ವಿಶೇಷ ಪೂಜೆ:
ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಆರಂಭವಾದ ಧಾರ್ಮಿಕ ವಿಧಿ ವಿಧಾನಗಳು ಬೆಳಗಿನ ಜಾವದ ತನಕ ಆಚರಣೆ ಮಾಡಲಾಯಿತು. ಪಂಚಾಮೃತ ಅಭಿಷೇಕ, ಅಲಂಕಾರ, ಉಯ್ಯಾಲೆ ಸೇವೆ, ಪ್ರಕಾರೋತ್ಸವಗಳು ಜರುಗಿದವು. ವಿಶೇಷ ಹೂಗಳಿಂದ ದೇವರನ್ನು ಅಲಂಕರಿಸಲಾಗಿತ್ತು. ಭಕ್ತರಿಗೆ ವಿಶೇಷ ಪೂಜಾ ವ್ಯವಸ್ಥೆ ಕಲ್ಪಿಸಲಾಗಿತ್ತು.ವೈಕುಂಠ ದ್ವಾರ:
ದೇವಾಲಯಗಳಲ್ಲಿ ವೈಕುಂಠ ದ್ವಾರ ನಿರ್ಮಾಣ ಮಾಡಿ ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಜತೆಗೆ, ದೇವರ ದರ್ಶನದ ಬಳಿಕ ಭಕ್ತರು ಹಾಗೂ ಸಾರ್ವಜನಿಕರು ವೈಕುಂಠ ದ್ವಾರದ ಮೂಲಕ ಹೊರ ಬಂದ ದೃಶ್ಯ ಕಂಡು ಬಂದಿತು. ಬಹುತೇಕ ಎಲ್ಲಾ ದೇವಾಲಯಗಳಲ್ಲಿ ಲಾಡು ಪ್ರಸಾದವನ್ನು ವಿತರಣೆ ಮಾಡಲಾಗಿದೆ.ವೈಕುಂಠ ಏಕಾದಶಿ ಪ್ರಯುಕ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಕಾರಣ, ಆಯಾ ದೇವಾಲಯ ಆಡಳಿತ ಮಂಡಳಿ ವತಿಯಿಂದ ಯಾವುದೇ ಅನನುಕೂಲವಾಗದಂತೆ ನೋಡಿಕೊಳ್ಳಲಾಗಿತ್ತು. ಹಾಗಾಗಿ ಭಕ್ತರು ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದುಕೊಂಡರು.
ರಾಮನಗರದ ಜಾಲಮಂಗಲ ರಸ್ತೆಯಲ್ಲಿನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಾಲಯವನ್ನು ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ವಿಶೇಷ ದರ್ಶನ ವ್ಯವಸ್ಥೆ ಕಲ್ಪಿಸಲಾಗಿತ್ತು. ಭಕ್ತರಿಗೆ ಲಾಡು ಪ್ರಸಾದ ವಿತರಣೆ ಮಾಡಲಾಯಿತು. ಕೂಟಗಲ್ ತಿಮ್ಮಪ್ಪ, ಕೋತಿ ಆಂಜನೇಯ ಸ್ವಾಮಿ ದೇವಾಲಯ ಹಾಗೂ ರಾಮದೇವರ ಬೆಟ್ಟದ ಪಟ್ಟಾಭಿಸೀತರಾಮ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು.10ಕೆಆರ್ ಎಂಎನ್ 3,4.ಜೆಪಿಜಿ
3.ರಾಮನಗರದ ಛತ್ರದ ಬೀದಿಯಲ್ಲಿನ ಶ್ರೀ ರಾಮದೇವರಿಗೆ ವಿಶೇಷ ಅಲಂಕಾರ ಮಾಡಿರುವುದು.4.ರಾಮನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಜನರು ವಿಶೇಷ ಪೂಜೆ ಸಲ್ಲಿಸಿದರು.