ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಜಗದ್ಗುರುಗಳ ಧನುರ್ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಕಾರ್ಯಕ್ರಮ 22ರಿಂದ 25ರವರೆಗೆ ಪ್ರತಿ ದಿನ ಸಂಜೆ 6.30ಕ್ಕೆ ರಂಭಾಪುರಿ ಜಗದ್ಗುರುಗಳ ದಿವ್ಯಸಾನಿಧ್ಯದಲ್ಲಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ತುಮಕೂರು ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಜಗದ್ಗುರುಗಳ ಧನುರ್ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಕಾರ್ಯಕ್ರಮ 22ರಿಂದ 25ರವರೆಗೆ ಪ್ರತಿ ದಿನ ಸಂಜೆ 6.30ಕ್ಕೆ ರಂಭಾಪುರಿ ಜಗದ್ಗುರುಗಳ ದಿವ್ಯಸಾನಿಧ್ಯದಲ್ಲಿ ನಡೆಯಲಿದೆ.

ಈ ಧರ್ಮ ಜಾಗೃತಿ ಸಮಾರಂಭವನ್ನು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಉದ್ಘಾಟಿಸುವರು. ಗೃಹ ಸಚಿವ ಡಾ.ಜಿ.ಪರಮೇಶ್ವರ್ ದಿನದರ್ಶಿ ಬಿಡುಗಡೆ ಮಾಡುವರು, ಸಿದ್ಧರಬೆಟ್ಟ ಮಠದ ವೀರಭದ್ರಶಿವಾಚಾರ್ಯ ಸ್ವಾಮೀಜಿ ಉಪದೇಶಾಮೃತ ನೀಡುವರು. ಎಡೆಯೂರು ಕ್ಷೇತ್ರದ ರೇಣುಕಾ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಅಂಕನಹಳ್ಳಿ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಬಾಳೆಹೊನ್ನೂರು ಕ್ಷೇತ್ರದ ರೇಣುಕಾಚಾರ್ಯ ಸ್ವಾಮೀಜಿ, ಅಂಬಲದೇವರಹಳ್ಳಿ ಮಠದ ಉಜ್ಜನೀಶ್ವರ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸುವರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಡಾ.ಎಸ್.ಪರಮೇಶ್, ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಹರೀಶ್ ಮೊದಲಾದವರು ಅತಿಥಿಗಳಾಗಿ ಪಾಲ್ಗೊಳ್ಳುವರು.23ರಂದು ಸಂಜೆ ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿ ಮಠದ ಕಾರದ ವೀರಬಸವ ಸ್ವಾಮೀಜಿ, ಹೊಳವನಹಳ್ಳಿ ಮಠದ ನಂಜುಂಡೇಶ್ವರ ಶಿವಾಚಾರ್ಯ ಸ್ವಾಮೀಜಿ, ವಾದಿಹಳ್ಳಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಮಾಜಿ ಸಚಿವ ಸೊಗಡು ಶಿವಣ್ಣ ಇನ್ನಿತರ ಗಣ್ಯರು ಭಾಗವಹಿಸುವರು.24ರ ಸಂಜೆಯ ಸಮಾರಂಭದಲ್ಲಿ ತೆವಡೆಹಳ್ಳಿ ಮಠದ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ, ಹೊನ್ನವಳ್ಳಿ ಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಕುಪ್ಪೂರು ಗದ್ದಿಗೆಮಠದ ತೇಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಾಹಿತಿ ಪ್ರಶಾಂತ್ ರಿಪ್ಪನ್‌ಪೇಟೆ, ಮಾಜಿ ಸಂಸದ ಜಿ.ಎಸ್.ಬಸವರಾಜು ಮತ್ತಿತರರು ಪಾಲ್ಗೊಳ್ಳುವರು. 25ರಂದು ಸಂಜೆ ದೊಡ್ಡಗುಣಿ ಹಿರೇಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕಾರ್ಯದರ್ಶಿ ವಿನಯ್ ಬಿದರೆ, ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್, ಮಾಜಿ ಎಂಎಲ್‌ಸಿ ಡಾ.ಎಂ.ಆರ್.ಹುಲಿನಾಯ್ಕರ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸುವರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಟಿ.ಆರ್.ಸದಾಶಿವಯ್ಯ ಮನವಿ ಮಾಡಿದ್ದಾರೆ.