ಬಡ ಮಹಿಳೆಯರಿಗೆ ಧರ್ಮಸ್ಥಳ ಸಂಸ್ಥೆ ನೆರವು

| Published : Jan 24 2024, 02:02 AM IST

ಸಾರಾಂಶ

ಮಾಗಡಿ: ನಮ್ಮ ರಾಜ್ಯ ಬಿಟ್ಟರೆ ಬೇರೆ ಯಾವ ರಾಜ್ಯದಲ್ಲೂ ಈ ರೀತಿ ದುರ್ಬಲ ವರ್ಗದ ಮಹಿಳೆಯರ ಪರ ನಿಂತಿರುವ ಯಾವ ಟ್ರಸ್ಟನ್ನೂ ನೋಡಿಲ್ಲ ಎಂದು ಗುಮ್ಮಸಂದ್ರ ಮಠಾಧ್ಯಕ್ಷ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.

ಮಾಗಡಿ: ನಮ್ಮ ರಾಜ್ಯ ಬಿಟ್ಟರೆ ಬೇರೆ ಯಾವ ರಾಜ್ಯದಲ್ಲೂ ಈ ರೀತಿ ದುರ್ಬಲ ವರ್ಗದ ಮಹಿಳೆಯರ ಪರ ನಿಂತಿರುವ ಯಾವ ಟ್ರಸ್ಟನ್ನೂ ನೋಡಿಲ್ಲ ಎಂದು ಗುಮ್ಮಸಂದ್ರ ಮಠಾಧ್ಯಕ್ಷ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಪಟ್ಟಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಹೊಸಪೇಟೆ ವಲಯದ ವತಿಯಿಂದ ಶ್ರೀ ಮಂಜುನಾಥ ಸ್ವಾಮಿ ಸಹಸ್ರ ಬಿಲ್ವಾರ್ಚನೆ ಹಾಗೂ ಸಾಧನಾ ಸಮಾವೇಶದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಗ್ರಾಮೀಣರ ಕಷ್ಟಗಳಿಗೆ ಸ್ಪಂದಿಸಿ ಅವರ ಆರ್ಥಿಕ ಸುಧಾರಣೆಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಸಾಧನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮೆಚ್ಚಿ ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಶೈಕ್ಷಣಿಕವಾಗಿ ಹಿಂದುಳಿದ ಕುಟುಂಬಗಳ ನೆರವಿಗೆ ನಿಲ್ಲುತ್ತಿದೆ. ಕಷ್ಟ- ಕಾರ್ಪಣ್ಯಗಳಿಗೆ ನೆರವಾಗುವ ಸಂಸ್ಥೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು. ಈಡಿಗರ ಸಮುದಾಯ ಭವನದಲ್ಲಿ ಲಿಂಗ ಪ್ರತಿಷ್ಠಾಪನೆ ಮಾಡಿ ಸಹಸ್ರ ಬಿಲ್ವಾರ್ಚನೆ ನೆರವೇರಿಸಲಾಯಿತು. ತಾಲೂಕಿನಲ್ಲಿ ಉತ್ತಮ ಸಂಘ ನಡೆಸಿದ ಸದಸ್ಯರನ್ನು ಸನ್ಮಾನಿಸಲಾಯಿತು. ಜೆಡಿಎಸ್ ಮುಖಂಡ ಏಳಿಗೇಹಳ್ಳಿ ತಮ್ಮಣ್ಣಗೌಡ, ಯೋಜನಾಧಿಕಾರಿಗಳು, ಮೇಲ್ವಿಚಾರಕರು ಸಂಘದ ಸದಸ್ಯರು ಭಾಗವಹಿಸಿದ್ದರು. (ಫೋಟೋ ಕ್ಯಾಪ್ಷನ್‌)

ಮಾಗಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಉತ್ತಮ ಸಂಘಗಳಿಗೆ ಗುಮ್ಮಸಂದ್ರ ಮಠಾಧ್ಯಕ್ಷ ಚಂದ್ರಶೇಖರ ಸ್ವಾಮೀಜಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು. ಜೆಡಿಎಸ್ ಮುಖಂಡ ಏಳಿಗೇಹಳ್ಳಿ ತಮ್ಮಣ್ಣಗೌಡ, ಯೋಜನಾಧಿಕಾರಿಗಳು, ಮೇಲ್ವಿಚಾರಕರು ಸಂಘದ ಸದಸ್ಯರು ಭಾಗವಹಿಸಿದ್ದರು.