ಸಾರಾಂಶ
ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ ೬ ರಿಂದ ರಾತ್ರಿ ೮ರ ವರೆಗೆ ನಡೆದ ಕಾರ್ಯಕ್ರಮದಲ್ಲಿ ಊರಿನ ನಾಗರಿಕರು ಹಾಗೂ ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಕೂಡಾ ಕಾರ್ಯಕ್ರಮದ ಸೊಗಡನ್ನು ಆಸ್ವಾದಿಸಿದರು.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಎರಡು ತಿಂಗಳ ಕಾಲ ನಡೆದ ಪುರಾಣ ವಾಚನ- ಪ್ರವಚನ ಕಾರ್ಯಕ್ರಮ ಸೋಮವಾರ ಸಂಪನ್ನಗೊಂಡಿತು.ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ ೬ ರಿಂದ ರಾತ್ರಿ ೮ರ ವರೆಗೆ ನಡೆದ ಕಾರ್ಯಕ್ರಮದಲ್ಲಿ ಊರಿನ ನಾಗರಿಕರು ಹಾಗೂ ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಕೂಡಾ ಕಾರ್ಯಕ್ರಮದ ಸೊಗಡನ್ನು ಆಸ್ವಾದಿಸಿದರು. ಎರಡು ತಿಂಗಳು ನಡೆದ ಪುರಾಣ ವಾಚನದಲ್ಲಿ ೧೪ ಮಂದಿ ಹಾಗೂ ಪ್ರವಚನದಲ್ಲಿ ೨೦ ಮಂದಿ ವಿದ್ವಾಂಸರು ಭಾಗವಹಿಸಿದರು. ಸೋಮವಾರ ಸುಪ್ರೀತಾ ಕೋರ್ನಾಯ ವಾಚನ ಮಾಡಿದರೆ, ಅಶೋಕ ಭಟ್ ಪ್ರವಚನ ನೀಡಿದರು.ಸಮಾರೋಪ ಸಮಾರಂಭದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ ಎಲ್ಲರನ್ನೂ ಗೌರವಿಸಿ ಅಭಿನಂದಿಸಿದರು.