ಧರ್ಮಸ್ಥಳ: 7ರಂದು ಉಪರಾಷ್ಟ್ರಪತಿಗಳಿಂದ ಕ್ಯೂ ಕಾಂಪ್ಲೆಕ್ಸ್‌ ‘ಶ್ರೀ ಸಾನಿಧ್ಯ’ ಉದ್ಘಾಟನೆ

| Published : Jan 05 2025, 01:33 AM IST

ಧರ್ಮಸ್ಥಳ: 7ರಂದು ಉಪರಾಷ್ಟ್ರಪತಿಗಳಿಂದ ಕ್ಯೂ ಕಾಂಪ್ಲೆಕ್ಸ್‌ ‘ಶ್ರೀ ಸಾನಿಧ್ಯ’ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಸಂಕೀರ್ಣದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಭಕ್ತರಿಗೆ ಎಲ್ಲ ಸೌಲಭ್ಯ ಅಳವಡಿಸಲಾಗಿದೆ. 16 ವಿಶಾಲ ಸಭಾಭವನಗಳಿದ್ದು, ಸರತಿಸಾಲಿನಲ್ಲಿ ಬಂದ ಭಕ್ತರು ವಿಶ್ರಾಂತಿ ಪಡೆಯಬಹುದು. ಪ್ರತಿ ಸಭಾಭವನದಲ್ಲಿ 800 ಮಂದಿ ತಂಗಲು ಅವಕಾಶವಿದೆ.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ನಾಡಿನ ಪುಣ್ಯ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಭಕ್ತರಿಗೆ ಅನುಕೂಲವಾಗಲು ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ವನ್ನು ಜ.7ರಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಉದ್ಘಾಟಿಸಲಿದ್ದಾರೆ.

ಡಾ. ಸುದೇಶ ಧನಕರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹೇಮಾವತಿ ವೀ. ಹೆಗ್ಗಡೆ, ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸುವರು. ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಕಲ ಸೌಲಭ್ಯಗಳನ್ನೊಳಗೊಂಡ ಸರತಿ ಸಾಲಿನ ಸಮುಚ್ಚಯ 2,75,177 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿದ್ದು, ಎರಡು ಅಂತಸ್ತು ಹೊಂದಿದೆ. ಸಂಕೀರ್ಣದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಭಕ್ತರಿಗೆ ಎಲ್ಲ ಸೌಲಭ್ಯ ಅಳವಡಿಸಲಾಗಿದೆ. 16 ವಿಶಾಲ ಸಭಾಭವನಗಳಿದ್ದು, ಸರತಿಸಾಲಿನಲ್ಲಿ ಬಂದ ಭಕ್ತರು ವಿಶ್ರಾಂತಿ ಪಡೆಯಬಹುದು. ಪ್ರತಿ ಸಭಾಭವನದಲ್ಲಿ 800 ಮಂದಿ ತಂಗಲು ಅವಕಾಶವಿದೆ. ಮಕ್ಕಳ ಆರೈಕೆ ಕೊಠಡಿ, ಶೌಚಗೃಹ, ಕ್ಯಾಂಟೀನ್ ಸೌಲಭ್ಯವಿದೆ. ಅಲ್ಲಲ್ಲಿ ಸೂಚನಾ ಫಲಕ ಹಾಗೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪ್ರವೇಶದ್ವಾರದ ಎದುರು ಧರ್ಮಸ್ಥಳದ ಇತಿಹಾಸ ಮತ್ತು ಪರಂಪರೆ ಬಿಂಬಿಸುವ ಆಕರ್ಷಕ ಕಲಾಕೃತಿಗಳನ್ನು ಅಳವಡಿಸಲಾಗಿದೆ.