ಸಾರಾಂಶ
ಬ್ಯಾಂಕ್ ಆಫ್ ಬರೋಡಾದ ಅಸಿಸ್ಟೆಂಟ್ ಮ್ಯಾನೇಜರ್ ನಿತಿನ್ ಅವರು ಬ್ಯಾಂಕ್ ಮತ್ತು ಗ್ರಾಮಾಭಿವೃದ್ಧಿ ಯೋಜನೆಗಿರುವ ಸಂಪರ್ಕದ ಬಗ್ಗೆ ಮಾಹಿತಿ ನೀಡಿದರು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮೂಡುಬಿದಿರೆ ಇದರ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶವು ಕನ್ನಡಭವನದಲ್ಲಿ ಮಂಗಳವಾರ ನಡೆಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿ ಸಂಪತ್ ಸಾಮ್ರಾಜ್ಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಸುಭಾಶ್ಚಂದ್ರ ಚೌಟ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ ಮತ್ತು ದ.ಕ. ಜಿಲ್ಲೆಯ ನಿರ್ದೇಶಕ ಮಹಾಬಲ ಕುಲಾಲ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.
ಬ್ಯಾಂಕ್ ಆಫ್ ಬರೋಡಾದ ಅಸಿಸ್ಟೆಂಟ್ ಮ್ಯಾನೇಜರ್ ನಿತಿನ್ ಅವರು ಬ್ಯಾಂಕ್ ಮತ್ತು ಗ್ರಾಮಾಭಿವೃದ್ಧಿ ಯೋಜನೆಗಿರುವ ಸಂಪರ್ಕದ ಬಗ್ಗೆ ಮಾಹಿತಿ ನೀಡಿದರು.ಪ್ರೇಮನಾಥ್ ಅವರು ಅವರು ಸಂಘದ ಮರುಪಾವತಿ ಚೀಟಿ ಬದಲಾವಣೆಯ ಬಗ್ಗೆ ಮಾಹಿತಿ ನೀಡಿದರು. ಯೋಜನಾಧಿಕಾರಿ ಸುನೀತಾ ನಾಯ್ಕ್ ಸ್ವಾಗತಿಸಿ ತಾಲೂಕಿನ 2023-24 ನೇ ಸಾಲಿನ ಸಾಧನಾ ವರದಿ ಮತ್ತು 2024ರ ಸಾಲಿನ ಸಮುದಾಯ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಇತರ ಕಾರ್ಯಕ್ರಮಗಳ ವರದಿಯನ್ನು ಮಂಡಿಸಿದರು. ಮೂಡುಬಿದಿರೆ ವಲಯದ ಮೇಲ್ವೀಚಾರಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು. ಆಲಂಗಾರು ವಲಯದ ಮೇಲ್ವೀಚಾರಕ ವಿಠ್ಠಲ್ ವಂದಿಸಿದರು.