ಸಾರಾಂಶ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಮಹಿಳೆಯರು ಬ್ಯಾಂಕಿನ ಮೂಲಕ ತೀರಾ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಪಡೆದು ಕುಟುಂಬದ ಅಭಿವೃದ್ಧಿ ಮಾಡಿಕೊಂಡಿದ್ದಾರೆ ಎಂದು ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಚಾಲಕಿ ಲೀಲಾಜಿ ಹೇಳಿದರು.
ಹಾವೇರಿ: ಮಹಿಳೆಯರು ಸ್ವಸಹಾಯ ಸಂಘಗಳನ್ನು ರಚಿಸಿಕೊಂಡು ಸ್ವಾವಲಂಬಿ ಬದುಕು ಸಾಗಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿಯಾಗಿದೆ ಎಂದು ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಚಾಲಕಿ ಲೀಲಾಜಿ ಹೇಳಿದರು.
ತಾಲೂಕಿನ ದೇವಗಿರಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಏರ್ಪಡಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಮಹಿಳೆಯರು ಬ್ಯಾಂಕಿನ ಮೂಲಕ ತೀರಾ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಪಡೆದು ಕುಟುಂಬದ ಅಭಿವೃದ್ಧಿ ಮಾಡಿಕೊಂಡಿದ್ದಾರೆ. ಮಹಿಳೆಯರಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಜಾಗ್ರತರಾಗಿದ್ದಾರೆ ಎಂದರು. ಯೋಜನೆಯ ಜಿಲ್ಲಾ ನಿರ್ದೇಶಕ ಶಿವರಾಯಪ್ರಭು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಸಂಸ್ಕಾರದ ಬೀಜ ಬಿತ್ತಲು ಧಾರ್ಮಿಕ, ನೈತಿಕ ಪ್ರಜ್ಞೆ ತಾಯಂದಿರು ಬೆಳೆಸಬೇಕು ಎಂದು ಹೇಳಿ ಸತ್ಯನಾರಾಯಣ ಪೂಜೆಯ ಮಹತ್ವ ತಿಳಿಸಿದರು.
ಗ್ರಾಪಂ ಅಧ್ಯಕ್ಷ ಪ್ರಭಾಕರ ಪಾರಿಗಂಟಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ವಿರೂಪಾಕ್ಷಪ್ಪ ಕಡ್ಲಿ, ತಾಪಂ ಮಾಜಿ ಸದಸ್ಯ ಸತೀಶ ಸಂದಿಮನಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಪ್ರಭಾಕರರಾವ್ ಮಂಗಳೂರು, ಕುಮಾರಸ್ವಾಮಿ ಗಡ್ಡದಮಠ, ಒಕ್ಕೂಟದ ಅಧ್ಯಕ್ಷೆ ಪೂರ್ಣಿಮಾ, ಸುಶೀಲ ಮತ್ತಿತರರು ಇದ್ದರು.ಯೋಜನಾಧಿಕಾರಿ ನಾರಾಯಣ ಜಿ. ಸ್ವಾಗತಿಸಿದರು. ಮೇಲ್ವಿಚಾರಕಿ ರತ್ನಾ ಕಾರ್ಯಕ್ರಮ ನಿರೂಪಿಸಿದರು. ವೀಣಾ ವಂದಿಸಿದರು.