ಖಾಸಗಿ ಕಂಪನೀಲಿ ಕನ್ನಡಿಗರಿಗೆಉದ್ಯೋಗ ಮೀಸಲಿಗಾಗಿ ಧರಣಿ

| Published : Oct 20 2024, 01:51 AM IST

ಸಾರಾಂಶ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡ ಜಾಗೃತಿ ವೇದಿಕೆ ಕಾರ್ಯಕರ್ತರು ಶನಿವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡ ಜಾಗೃತಿ ವೇದಿಕೆ ಕಾರ್ಯಕರ್ತರು ಶನಿವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಸಂಘಟನೆ ಅಧ್ಯಕ್ಷ ಕೆ. ಮಂಜುನಾಥ ದೇವ ಮಾತನಾಡಿ, ರಾಜ್ಯ ಸರ್ಕಾರದಿಂದ ರಿಯಾಯಿತಿಯಲ್ಲಿ ಸ್ಥಳ, ನೀರು, ವಿದ್ಯುತ್‌ ಪಡೆಯುವ ಖಾಸಗಿ ಕಂಪನಿಗಳು ಉದ್ಯಮ ಸ್ಥಾಪಿಸುತ್ತಿವೆ. ಆದರೆ, ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ತಾರತಮ್ಯ ಅನುಸರಿಸುತ್ತಿವೆ. ಕನ್ನಡಿಗರಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಲು ಹಾಗೂ ಅರ್ಹತೆಗೆ ತಕ್ಕ ಉದ್ಯೋಗ ಪಡೆಯಲು ಇದು ಅಡ್ಡಿಯಾಗುತ್ತಿದೆ. ರಾಜ್ಯದ ಐಟಿ ಬಿಟಿ ಕಂಪನಿಗಳು, ಬಹುರಾಷ್ಟ್ರೀಯ ಕಂಪನಿಗಳು, ಶಾಪಿಂಗ್‌ ಮಾಲ್‌, ಬ್ಯಾಂಕ್‌ ಸೇರಿ ಎಲ್ಲ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಲು ಸರ್ಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಖಾಸಗಿಯಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ವಿಚಾರದಲ್ಲಿ ಒಂದಿಷ್ಟು ಕಾನೂನು ತೊಡಕಿದೆ. ಅದನ್ನು ನಿವಾರಿಸಿ ಮಸೂದೆ ಜಾರಿಗೊಳಿಸಲಾಗುವುದು. ಕನ್ನಡಿಗರಿಗೆ ಉದ್ಯೋಗದ ಹಕ್ಕನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾಗಿ ಮಂಜುನಾಥ್‌ ತಿಳಿಸಿದರು.

------

ಫೋಟೋ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡ ಜಾಗೃತಿ ವೇದಿಕೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತು.