ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿಸಂವಿಧಾನದ ವಿಧಿ 244 ಆರ್/ಡಬ್ಲ್ಯೂ 6 ಮತ್ತು 8 ನೇ ಶೆಡ್ಯೂಲ್ ಅಡಿಯಲ್ಲಿ ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಗಣರಾಜ್ಯೋತ್ಸವದ ದಿನವಾದ ಶುಕ್ರವಾರ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿತು.
ಕೊಡವ ಲ್ಯಾಂಡ್ ಪರ ಘೋಷಣೆಗಳನ್ನು ಕೂಗಿದ ಸಿಎನ್‌ಸಿ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ವಿಶ್ವರಾಷ್ಟ್ರ ಸಂಸ್ಥೆಯ 217 ವಿಧಿಯಂತೆ ಪ್ರಾಚೀನ ಆದಿಮ ಸಂಜಾತ ಸೂಕ್ಷ್ಮತೀ ಸೂಕ್ಷ್ಮ ಕೊಡವರ ಸ್ವಯಂ-ನಿರ್ಣಯ ಹಕ್ಕುಗಳನ್ನು ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಗೌರವಿಸಬೇಕು ಮತ್ತು ಖಾತರಿಪಡಿಸಬೇಕು. ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಲು ಪೂರಕವಾಗಿ ಸಿಎನ್‌ಸಿಯ ಮೇಲ್ಮನವಿಯನ್ನು ಪರಿಗಣಿಸಿ ಕೊಡವರ ಸಮಗ್ರ ಕುಲಶಾಸ್ತ್ರ ಅಧ್ಯಯನವನ್ನು ನಡೆಸಲು ಹೈಕೋರ್ಟ್ ನೀಡಿರುವ ಆದೇಶವನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.ಎನ್.ಯು.ನಾಚಪ್ಪ ಮಾತನಾಡಿ, ಸಮಾನತೆಯ ಹಕ್ಕು, ಸ್ವಾತಂತ್ರ್ಯ ಹಕ್ಕು, ಶೋಷಣೆಯ ವಿರುದ್ಧದ ಹಕ್ಕು, ಧಾರ್ಮಿಕ ಸ್ವಾತಂತ್ರ್ಯ ಹಕ್ಕು, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕುಗಳು ಹಾಗೂ ಸಾಂವಿಧಾನಿಕ ಪರಿಹಾರಗಳ ಹಕ್ಕು ಸೇರಿದಂತೆ ಆರು ಮೂಲಭೂತ ಹಕ್ಕುಗಳನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಇದರಡಿ ಕೊಡವರ ಹಕ್ಕುಗಳನ್ನು ನಾವು ಕೇಳುತ್ತಿದ್ದೇವೆ ಎಂದರು.
ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿ, ಪ್ರಧಾನಮಂತ್ರಿ, ವಿಶ್ವ ರಾಷ್ಟ್ರ ಸಂಸ್ಥೆಯ ಮಹಾ ಕಾರ್ಯದರ್ಶಿ, ಕೇಂದ್ರ ಕಾನೂನು ಮಂತ್ರಿ, ಕೇಂದ್ರ ಗೃಹಮಂತ್ರಿ, ವಿಶ್ವವಿಖ್ಯಾತ ಅರ್ಥಶಾಸ್ತ್ರ ಡಾ.ಸುಬ್ರಮಣಿಯನ್ ಸ್ವಾಮಿ, ಕರ್ನಾಟಕದ ಮುಖ್ಯಮಂತ್ರಿ ಮತ್ತು ಯುನೆಸ್ಕೋದ ಮಹಾನ್ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.ಚೋಳಪಂಡ ಜ್ಯೋತಿ ನಾಣಯ್ಯ, ಸರ್ವ ಶ್ರೀ ಕಾಂಡೇರ ಸುರೇಶ್, ಅಳ್ಮಂಡ ಜೈ, ಪಟ್ಟಮಾಡ ಕುಶ, ಅಜ್ಜಿಕುಟ್ಟಿರ ಲೋಕೇಶ್, ಚಬ್ಬಂಡ ಜನತ್, ಕಿರಿಯಮಾಡ ಶರೀನ್, ಪಾರ್ವಂಗಡ ನವೀನ್, ಮಂದಪಂಡ ಮನೋಜ್, ಪುಲ್ಲೆರ ಕಾಳಪ್ಪ, ಕಾಟುಮಣಿಯಂಡ ಉಮೇಶ್, ಕೂಪದಿರ ಸಾಬು, ಮಣವಟ್ಟಿರ ಚಿಣ್ಣಪ್ಪ, ಪುದಿಯೊಕ್ಕಡ ಕಾಶಿ, ಪುಟ್ಟಿಚಂಡ ಡಾನ್ ದೇವಯ್ಯ, ಚೋಳಪಂಡ ನಾಣಯ್ಯ, ಬಡುವಂಡ ವಿಜಯ, ನಾಪಂಡ ಅರುಣ್, ಮೇದೂರ ಕಂಠಿ, ಬೊಳ್ಳಾರ್‌ಪಂಡ ಮಾಚಯ್ಯ ಧರಣಿಯಲ್ಲಿ ಪಾಲ್ಗೊಂಡಿದ್ದರು.