ಇಂದು 16 ಚಿತ್ರಮಂದಿರಗಳಲ್ಲಿ ಧರ್ಮ ಚಾವಡಿ ಚಲನಚಿತ್ರ ತೆರೆಗೆ

| Published : Jul 11 2025, 12:32 AM IST

ಸಾರಾಂಶ

ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ತಯಾರಾದ ಧರ್ಮಚಾವಡಿ ತುಳು ಚಿತ್ರ ಶುಕ್ರವಾರ ದ.ಕ ಹಾಗೂ ಉಡುಪಿ ಜಿಲ್ಲೆಯ ಸುಮಾರು ೧೬ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ

ಕನ್ನಡಪ್ರಭ ವಾರ್ತೆ ಪುತ್ತೂರು

ಮಂಗಳೂರು ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ತಯಾರಾದ ಧರ್ಮಚಾವಡಿ ತುಳು ಚಿತ್ರ ಶುಕ್ರವಾರ ದ.ಕ ಹಾಗೂ ಉಡುಪಿ ಜಿಲ್ಲೆಯ ಸುಮಾರು ೧೬ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮ ದೈವ ಚಿತ್ರ ಬಳಿಕ ಇದು ಎರಡನೇ ಚಿತ್ರವಾಗಿದ್ದು, ಧರ್ಮ ಚಾವಡಿ ಈಗಾಗಲೇ ಮುಂಬೈಯಲ್ಲಿ ವೀಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.ಚಿತ್ರಕ್ಕೆ ಪ್ರಸಾದ್ ಕೆ. ಶೆಟ್ಟಿ ಸಂಗೀತ ನೀಡಿದ್ದು, ಶ್ರೀನಾಥ್ ಪವಾರ್ ಸಂಕಲನ, ಅರುಣ್ ರೈ ಪುತ್ತೂರು ಛಾಯಾಗ್ರಹಣದಲ್ಲಿ ಸಹಕರಿಸಿದ್ದು, ರಜಾಕ್ ಪುತ್ತೂರು ಚಿತ್ರಕತೆ ಬರೆದಿದ್ದಾರೆ. ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ನಾಯಕಿ ನಟಿಯಾಗಿ ಧನ್ಯ ಪೂಜಾರಿ ನಟಿಸಿದ್ದಾರೆ. ಉಳಿದಂತೆ ರವಿ ಸ್ನೇಹಿತ್, ಚೇತನ್ ರೈ ಮಾಣಿ, ಸುರೇಶ್ ರೈ, ಪ್ರಕಾಶ್ ಧರ್ಮನಗರ, ದೀಪಕ್ ರೈ ಪಾಣಾಜೆ, ಸುಂದರ್ ರೈ ಮಂದಾರ, ರಂಜನ್ ಬೋಳೂರು, ಮನೀಶ್ ಶೆಟ್ಟಿ ಸಿದ್ಧಕಟ್ಟೆ, ರಕ್ಷಣ್ ಮಾಡೂರು, ರೂಪ ಡಿ. ಶೆಟ್ಟಿ, ಸವಿತಾ ಅಂಚನ್, ನೇಹಾ ಕೋಟ್ಯಾನ್, ನಿಶ್ಮಿತಾ ಶೆಟ್ಟಿ ಸೇರಿದಂತೆ ಹಲವಾರು ಕಲಾವಿದರು ನಟಿಸಿದ್ದಾರೆ ಎಂದು ತಿಳಿಸಿದರು.ಸುದ್ಧಿಗೋಷ್ಠಿಯಲ್ಲಿ ನಾಯಕಿ ನಟಿ ಧನ್ಯ ಪೂಜಾರಿ, ನಿರ್ಮಾಪಕ ಜಗದೀಶ್ ಅಮೀನ್, ಅರುಣ್ ರೈ ಪುತ್ತೂರು, ದಯಾನಂದ ರೈ ಬೆಟ್ಟಂಪಾಡಿ, ಹಂಚಿಕೆದಾರ ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ ಉಪಸ್ಥಿತರಿದ್ದರು.