ಧರ್ಮರಾಜ ಚಡಚಣ ಹತ್ಯೆ: ವಿಚಾರಣೆಗೆ ಹಾಜರಾದ ಆರೋಪಿಗಳು

| Published : Dec 30 2023, 01:30 AM IST

ಸಾರಾಂಶ

ಭೀಮಾತೀರದ ಹಂತಕ ಧರ್ಮರಾಜ ಚಡಚಣ ನಕಲಿ ಪೊಲೀಸ್ ಎನ್‌ಕೌಂಟರ್ ಹಾಗೂ ಆತನ ಸಹೋದರ ಗಂಗಾಧರ ಚಡಚಣ ನಿಗೂಢ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹದೇವ ಭೈರಗೊಂಡ ಸೇರಿ15 ಜನ ಸಹಚರರು ಶುಕ್ರವಾರ ವಿಜಯಪುರ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಭೀಮಾತೀರದ ಹಂತಕ ಧರ್ಮರಾಜ ಚಡಚಣ ನಕಲಿ ಪೊಲೀಸ್ ಎನ್‌ಕೌಂಟರ್ ಹಾಗೂ ಆತನ ಸಹೋದರ ಗಂಗಾಧರ ಚಡಚಣ ನಿಗೂಢ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹದೇವ ಭೈರಗೊಂಡ ಸೇರಿ15 ಜನ ಸಹಚರರು ಶುಕ್ರವಾರ ವಿಜಯಪುರ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾದರು. ಪ್ರಕರಣದ ಮತ್ತೋರ್ವ ಆರೋಪಿ ಅಂದಿನ ಚಡಚಣ ಪಿಎಸ್‌ಐ ಗೋಪಾಲ್ ಹಳ್ಳೂರ ವಿಚಾರಣೆಗೆ ಗೈರು ಹಾಜರಾಗಿದ್ದರು.

ಭೀಮಾತೀರದ ಕೊಂಕಣಗಾಂವ್ ಗ್ರಾಮದ ತೋಟದಲ್ಲಿ ಅ.30, 2017 ರಂದು ಧರ್ಮರಾಜ ಚಡಚಣ ನಕಲಿ ಪೊಲೀಸ್ ಎನ್‌ಕೌಂಟರ್ ಹಾಗೂ ಆತನ ಸಹೋದರ ಗಂಗಾಧರ ಚಡಚಡ ನಿಗೂಢ ಹತ್ಯೆ ಪ್ರಕರಣದಲ್ಲಿ ಮಹಾದೇವ ಬೈರಗೊಂಡ ಪ್ರಮುಖ ಆರೋಪಿಯಾಗಿದ್ದಾನೆ. ಇದೇ ಪ್ರಕರಣದಲ್ಲಿ ಮಹದೇವ ಭೈರಗೊಂಡನಿಂದ ಹಣ ಪಡೆದು ನಕಲಿ ಎನ್‌ಕೌಂಟರ್ ನಡೆಸಿದ ಹಾಗೂ ಹತ್ಯೆಗೆ ಸಹಕರಿಸಿದ ಪ್ರಕರಣದಲ್ಲಿ ಸಿಪಿಐ, ಪಿಎಸ್ಐ ಸೇರಿ ಒಟ್ಟು 18 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಪೊಲೀಸ್ ಭದ್ರತೆ:

ಆರೋಪಿಗಳ ವಿಚಾರಣೆ ಹಿನ್ನೆಲೆಯಲ್ಲಿ ಕೋರ್ಟ್ ಸುತ್ತಲೂ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ವಿಚಾರಣೆ ಬಳಿಕ ನ್ಯಾಯಾಲಯದ ಆವರಣದಲ್ಲಿ ಭೈರಗೊಂಡ ಹಾಗೂ ಇತರೆ ಆರೋಪಿಗಳ ಸುತ್ತಲೂ ಸಶಸ್ತ್ರ ಪೊಲೀಸ್ ಕಾವಲು ಸಹಿತ ಭಾರಿ ಭದ್ರತೆ ನೀಡಿದ್ದರು.