ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ನೆಲೆಬೀಡು: ಲೀಲಾವತಿ

| Published : Oct 05 2025, 01:02 AM IST

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ನೆಲೆಬೀಡು: ಲೀಲಾವತಿ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ನೆಲೆಬೀಡಾಗಿದೆ ಎಂದು ಲೀಲಾವತಿ ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ನೆಲೆಬೀಡಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಹೇಳಿದರು.

ಮಡಿಕೇರಿಯ ರಾಣಿಪೇಟೆಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಆಯುಧ ಪೂಜೆ, ಗಣ ಹೋಮ ಮತ್ತು ಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಧಾರ್ಮಿಕ ಕಾರ್ಯಕ್ರಮದ ಭಾಗವಾಗಿ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ.

ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣ ಹಾಗೂ ಎಲ್ಲರ ಶ್ರೇಯಸ್ಸಿಗಾಗಿ ಸಂಕಲ್ಪ ಮಾಡಲಾಗಿದೆ ಎಂದರು. ನವರಾತ್ರಿ ಉತ್ಸವದ ಸಂದರ್ಭದಲ್ಲಿ ಶಕ್ತಿ ದೇವತೆಗಳನ್ನು ಆರಾಧನೆ ಮಾಡಿ ಒಂಭತ್ತು ದಿನಗಳ ಕಾಲ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ.

ಶ್ರೀ ಮಂಜುನಾಥ ಸ್ವಾಮಿ ಹಾಗೂ ದೇವತೆಗಳ ಅನುಗ್ರಹದಿಂದ ಉತ್ತಮ ಮಳೆ ಬೆಳೆಯಾಗಿ ಕನ್ನಡ ನಾಡು ಸಮೃದ್ಧವಾಗಿರಲಿ ಎಂದು ಆಶಿಸಿದರು. ಈ ಸಂದರ್ಭ ಆಯುಧ ಪೂಜೆ, ಗಣ ಹೋಮ, ಲಕ್ಷ್ಮಿ ಪೂಜೆ ಮತ್ತು ಭಜನಾ ಸೇವೆಯನ್ನು ಶ್ರದ್ಧಾ ಭಕ್ತಿಯಿಂದ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಐ.ಡಿ.ಬಿ.ಐ ಬ್ಯಾಂಕಿನ ಮಡಿಕೇರಿ ಶಾಖಾ ಪ್ರಬಂಧಕರಾದ ಮಿಥುನ್ ಕುಮಾರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲೆಯ ಸದಸ್ಯರಾದ ದೀರ್ಘಕೇಶಿ ಶಿವಣ್ಣ, ಟಿ.ಎಂ ಅಯ್ಯಪ್ಪ, ಧನಂಜಯ ಅಗೋಳಿಕಜೆ, ಬೆಳ್ಯನ ಚಂದ್ರ ಪ್ರಕಾಶ್, ತಾಲೂಕು ಕ್ಷೇತ್ರ ಯೋಜನಾಧಿಕಾರಿ ಪುರುಷೋತ್ತಮ, ವಲಯದ ಮೇಲ್ವಿಚಾರಕರು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿ, ಕಚೇರಿ ಪ್ರಬಂಧಕರು, ಸಹಾಯಕ ಪ್ರಬಂಧಕರು ಮತ್ತು ಕಚೇರಿ ಸಹಾಯಕರು ಉಪಸ್ಥಿತರಿದ್ದರು.