ಧರ್ಮಸ್ಥಳ: ೫೪ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

| Published : Jul 19 2025, 01:00 AM IST

ಧರ್ಮಸ್ಥಳ: ೫೪ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಬುಧವಾರ ೫೪ನೇ ವರ್ಷದ ಪುರಾಣ ವಾಚನ-ಪ್ರವಚನ ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು ನಿಟ್ಟೂರು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿಪುರಾಣ ಅಂದರೆ ಭಗವಂತನ ಕಥೆ. ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನ ಯಜ್ಞ ಹಾಗೂ ಜ್ಞಾನ ಸತ್ರವಾಗಿದ್ದು ಆಸಕ್ತಿ ಮತ್ತು ತನ್ಮಯತೆಯೊಂದಿಗೆ ಶ್ರದ್ಧಾ-ಭಕ್ತಿಯಿಂದ ಪುರಾಣ ವಾಚನ-ಪ್ರವಚನ ಶ್ರವಣದಿಂದ ಪ್ರತಿಯೊಬ್ಬರ ಮನದಲ್ಲೂ, ಮನೆಯಲ್ಲೂ ಸುಖ, ಶಾಂತಿ-ನೆಮ್ಮದಿ ನೆಲೆಸಿ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು ನಿಟ್ಟೂರು ಹೇಳಿದರು.

ಅವರು ಬುಧವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ೫೪ನೇ ವರ್ಷದ ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಡಿ. ಹರ್ಷೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಓದುವ ಹವ್ಯಾಸದಿಂದ ನಮ್ಮ ಜ್ಞಾನಕ್ಷಿತಿಜ ವಿಸ್ತಾರವಾಗುತ್ತದೆ. ಊರಿನವರು ಹಾಗೂ ಧರ್ಮಸ್ಥಳಕ್ಕೆ ಬರುವ ಭಕ್ತರು ಕೂಡ ಪುರಾಣ ವಾಚನ-ಪ್ರವಚನದ ಸದುಪಯೋಗ ಪಡೆದು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.ದೇವಳದ ಪಾರುಪತ್ಯಹಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಲೆಕ್ಕಪತ್ರ ವಿಭಾಗದ ಮುಖ್ಯಸ್ಥ ಪುರಂದರ ಭಟ್, ಉದಯಕುಮಾರ್ ಜೈನ್, ಚಂದ್ರಕಾಂತ್, ಮಹಾವೀರ ಅಜ್ರಿ, ಸಂತೋಷ್, ಭುಜಬಲಿ ಧರ್ಮಸ್ಥಳ ಮತ್ತಿತರರಿದ್ದರು.ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶಿಕ್ಷಕ ನಿಶಾಂತ್ ವಂದಿಸಿದರು.ಕುಮಾರವ್ಯಾಸ ವಿರಚಿತ ‘ಕರ್ಣಾಟ ಭಾರತ ಕಥಾಮಂಜರಿ’ ಬಗ್ಗೆ ಗಣಪತಿ ಪದ್ಯಾಣ ವಾಚನಕಾರರಾಗಿ ಹಾಗೂ ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿ ಸಹಕರಿಸಿದರು.ಸೆ.೧೬ರ ವರೆಗೆ ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ ೬.೩೦ರಿಂದ ರಾತ್ರಿ ೮ರ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದೆ.