ಸಾರಾಂಶ
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ನಿಮಿತ್ತ ಬೆಳ್ತಂಗಡಿ ತಾಲೂಕಿನ ಭಕ್ತರು ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿ ಕಡೆಗೆ ಭಕ್ತಿ ಭಜನೆಯ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು. ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ನಿಮಿತ್ತ ಬೆಳ್ತಂಗಡಿ ತಾಲೂಕಿನ ಭಕ್ತರು ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿ ಕಡೆಗೆ ಭಕ್ತಿ ಭಜನೆಯ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು. ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.ಬೆಳ್ತಂಗಡಿ ಹಳೇಕೋಟೆ ಶ್ರೀ ಸತ್ಯಸಾಯಿ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಹಾಗೂ ಉಜಿರೆ ವೃತ್ತದಲ್ಲಿ ವಿವಿಧ ಭಜನಾ ತಂಡಗಳಿಂದ ನೃತ್ಯ ಭಜನೆ ವಿಶೇಷ ಆಕರ್ಷಣೆಯಾಗಿತ್ತು.
ಪಾದಯಾತ್ರೆಯಲ್ಲಿ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ ಶೆಟ್ಟಿ, ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್., ಐಟಿ ವಿಭಾಗದ ಸಿಇಓ, ಸಂಚಾಲಕ ಪೂರನ್ ವರ್ಮಾ, ಕೆ. ಮೋಹನ್ ಕುಮಾರ್, ಮೋಹನ ಶೆಟ್ಟಿಗಾರ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ವಿ.ಪ.ಶಾಸಕ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದು ದೀಪ ಪ್ರಜ್ವಲಿಸಿದರು.ಎಸ್‌ಡಿಎಂ ಕಾಲೇಜು ಪ್ರಾಚಾರ್ಯ ಡಾ.ವಿಶ್ವನಾಥ ಪಿ., ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಸಿರಿ ಸಂಸ್ಥೆಯ ಎಂ.ಡಿ.ಜನಾರ್ದನ ಕೆ.ಎನ್., ಯೋಜನೆಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್, ಡಾ.ಪ್ರದೀಪ್ ನಾವೂರು, ಪ್ರಕಾಶ್ ಶೆಟ್ಟಿ ನೊಚ್ಚ, ಆನಂದ ಸುವರ್ಣ, ತಿಮ್ಮಪ್ಪ ಗೌಡ ಬೆಳಾಲು, ಎಂಜಿನಿಯರ್ ಗಣೇಶ್ ಎಂ., ಯದುಪತಿ ಗೌಡ, ಸಂತೋಷ್ ಸಾಲಿಯಾನ್, ರವೀಂದ್ರ ಶೆಟ್ಟಿ ಬಳಂಜ, ಖಾಸಿಂ ಮಲ್ಲಿಗೆಮನೆ, ಪುಷ್ಪಾವತಿ ಆರ್. ಶೆಟ್ಟಿ, ಪ್ರಶಾಂತ್ ಜೈನ್, ಲಕ್ಷಣ ಸಫಲ್ಯ, ಮಮತಾ ಶೆಟ್ಟಿ, ಸೀತಾರಾಮ ಬೆಳಾಲು, ರಾಜಶೇಖರ ಅಜ್ರಿ, ಡಾ.ಶ್ರೀಧರ ಭಟ್, ಶ್ರೀಧರ ಕೆ.ವಿ., ಸತ್ಯನಾರಾಯಣ ಎರ್ಕಾಡಿತ್ತಾಯ ಮತ್ತು ಸಹಸ್ರಾರು ಭಕ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದರು.
ಪಾದಯಾತ್ರಿಗಳಿಗೆ ಪಾನೀಯದ ವ್ಯವಸ್ಥೆ ಮಾಡಲಾಗಿತ್ತು.;Resize=(128,128))
;Resize=(128,128))
;Resize=(128,128))
;Resize=(128,128))