ಮಹಿಳೆಯರ ಸ್ವಾವಲಂಬನೆಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಕಾರಿಯಾಗಿದೆ

| Published : Feb 08 2024, 01:31 AM IST

ಮಹಿಳೆಯರ ಸ್ವಾವಲಂಬನೆಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಕಾರಿಯಾಗಿದೆ
Share this Article
  • FB
  • TW
  • Linkdin
  • Email

ಸಾರಾಂಶ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಲ್ಲಿ ಸಂಘಟನೆ ಜತೆಗೆ ಆತ್ಮವಿಶ್ವಾಸ ಬೆಳೆಯುತ್ತಿದೆ. ಜ್ಞಾನವಿಕಾಸ ಕೇಂದ್ರದ ಮೂಲಕ ಸದಸ್ಯರಿಗೆ ಪ್ರತಿ ತಿಂಗಳು ಆರೋಗ್ಯ, ಶಿಕ್ಷಣ, ಕಾನೂನು ಅರಿವು, ಮಕ್ಕಳ ಪಾಲನೆ ಪೋಷಣೆ, ಸಂಸ್ಕೃತಿ ಮತ್ತು ಸಂಸ್ಕಾರ, ಕುಟುಂಬ ನಿರ್ವಹಣೆ, ಸ್ವಉದ್ಯೋಗ ಮೊದಲಾದ ವಿಚಾರಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕೊಡಿಸಲಾಗುತ್ತಿದೆ. ಈ ಮೂಲಕ ಮಹಿಳೆಯರ ಸರ್ವತೋಮುಖ ಬೆಳವಣಿಗೆಗೆ ಧರ್ಮಸ್ಥಳ ಸಂಘ ಸಹಕಾರಿಯಾಗಿದೆ ಎಂದು ಸೊರಬ ತಾಲೂಕು ಭೈರೇಕೊಪ್ಪದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಸುಬ್ರಾಯ ನಾಯ್ಕ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಸೊರಬ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಲ್ಲಿ ಸಂಘಟನೆ ಜತೆಗೆ ಆತ್ಮವಿಶ್ವಾಸ ಬೆಳೆಯುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಸುಬ್ರಾಯ ನಾಯ್ಕ ಹೇಳಿದರು.

ಸೋಮವಾರ ತಾಲೂಕಿನ ಭೈರೇಕೊಪ್ಪ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಂದನ ಜ್ಞಾನವಿಕಾಸ ಕೇಂದ್ರ ಪ್ರಥಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಜ್ಞಾನವಿಕಾಸ ಕೇಂದ್ರದ ಮೂಲಕ ಸದಸ್ಯರಿಗೆ ಪ್ರತಿ ತಿಂಗಳು ಆರೋಗ್ಯ, ಶಿಕ್ಷಣ, ಕಾನೂನು ಅರಿವು, ಮಕ್ಕಳ ಪಾಲನೆ ಪೋಷಣೆ, ಸಂಸ್ಕೃತಿ ಮತ್ತು ಸಂಸ್ಕಾರ, ಕುಟುಂಬ ನಿರ್ವಹಣೆ, ಸ್ವಉದ್ಯೋಗ ಮೊದಲಾದ ವಿಚಾರಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕೊಡಿಸಲಾಗುತ್ತಿದೆ. ಈ ಮೂಲಕ ಮಹಿಳೆಯರ ಸರ್ವತೋಮುಖ ಬೆಳವಣಿಗೆಗೆ ಧರ್ಮಸ್ಥಳ ಸಂಘ ಸಹಕಾರಿಯಾಗಿದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಪರಿಕಲ್ಪನೆಯಲ್ಲಿ ನಡೆಯುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸದಸ್ಯರಾಗಿರುವುದು ಮಹಿಳೆಯರ ಸುಧೈವ. ಯೋಜನೆ ನೀಡುವ ಸೌಲಭ್ಯಗಳನ್ನು ಪಡೆದು ಸಮಾಜದಲ್ಲಿ ಗುರುತರವಾಗಿ ಬೆಳೆದು ಸ್ವಾವಲಂಬಿ ಆಗಬೇಕು ಎಂದು ತಿಳಿಸಿದರು.

ಬೈರೇಕೊಪ್ಪ ಗ್ರಾಮದ ಮಹಿಳೆಯರು ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಅಭಿವೃದ್ಧಿ ಹೊಂದಿದ್ದಾರೆ ಎಂದರೆ ಇಡೀ ಗ್ರಾಮಕ್ಕೆ ಹೆಮ್ಮೆಯ ವಿಷಯ. ಮುಂದಿನ ದಿನಗಳಲ್ಲಿಯೂ ಕೇಂದ್ರವನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಈ ಸಂದರ್ಭ ಮಹಿಳೆಯರಿಗೆ ಹಗ್ಗ ಜಗ್ಗಾಟ, ಗೋಣಿ ಚೀಲ ಓಟ ಮತ್ತು ಮಡಿಕೆ ಒಡೆಯುವ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕೇಂದ್ರದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮಲ್ಲಿ ಗ್ರಾಪಂ ಸದಸ್ಯೆ ನಾಗರತ್ನ, ಒಕ್ಕೂಟದ ಅಧ್ಯಕ್ಷ ಜಯಮ್ಮ, ಊರಿನ ಅಧ್ಯಕ್ಷ ಮಂಜಪ್ಪ, ಊರಿನ ಮುಖಂಡರಾದ ಚಂದ್ರಪ್ಪ, ಮೇಲ್ವಿಚಾರಕಿ ನೇತ್ರಾವತಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶೋಭಾ, ಸೇವಾ ಪ್ರತಿನಿಧಿ ಸುನೀತಾ ಮತ್ತು ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

- - - -06ಕೆಪಿಸೊರಬ01: ಸೊರಬ ತಾಲೂಕಿನ ಭೈರೇಕೊಪ್ಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಂದನ ಜ್ಞಾನ ವಿಕಾಸ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ಸಮಾರಂಭವನ್ನು ಗ್ರಾಪಂ ಸದಸ್ಯ ಮಂಜುನಾಥ ಉದ್ಘಾಟಿಸಿದರು.