ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ‘ವಾತ್ಸಲ್ಯ’ ಮನೆ ಹಸ್ತಾಂತರ

| Published : Feb 04 2025, 12:33 AM IST

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ‘ವಾತ್ಸಲ್ಯ’ ಮನೆ ಹಸ್ತಾಂತರ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮೂಡುಬಿದಿರೆ ವತಿಯಿಂದ ವಾಲ್ಪಾಡಿ ಗ್ರಾಮದ ಬಿಜಿಲು ಎಂಬವರಿಗೆ ನಿರ್ಮಿಸಲಾದ ‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮ ಸೋಮವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮೂಡುಬಿದಿರೆ ವತಿಯಿಂದ ವಾಲ್ಪಾಡಿ ಗ್ರಾಮದ ಬಿಜಿಲು ಎಂಬವರಿಗೆ ನಿರ್ಮಿಸಲಾದ ‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮ ಸೋಮವಾರ ನಡೆಯಿತು.

ಯೋಜನೆಯ ಟ್ರಸ್ಟಿ, ಶಿರ್ತಾಡಿ ಶಿಮುಂಜೆಗುತ್ತು ಸಂಪತ್ ಸಾಮ್ರಾಜ್ಯ ದೀಪ ಬೆಳಗಿಸಿ ಉದ್ಘಾಟಿಸಿ, ಸಮಾಜದಲ್ಲಿ ಹಿಂದುಳಿದವರಿಗೆ, ಅಶಕ್ತರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ.ಹೆಗ್ಗಡೆ ಹಲವಾರು ಸೇವಾ ಯೋಜನೆಗಳನ್ನು ರೂಪಿಸಿದ್ದಾರೆ. ಅವುಗಳ ಪೈಕಿ ವಾತ್ಸಲ್ಯ ಯೋಜನೆಯೂ ಒಂದು. ಬಡವರ ಪಾಲಿನ ಆಶಾಕಿರಣವಾಗುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಈ ಕೆಲಸ ಶ್ಲಾಘನೀಯ ಎಂದರು.

ವಾಲ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಶಾಲಾಕ್ಷಿ ಅಧ್ಯಕ್ಷತೆ ವಹಿಸಿದ್ದರು.

ಯೋಜನೆಯ ಉಡುಪಿ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು.

ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಧರ ಬಂಗೇರ, ಸುಶೀಲ, ಮಾಜಿ ಸದಸ್ಯ ಲಕ್ಷ್ಮಣ ಸುವರ್ಣ, ಯೋಜನೆಯ ವಿವಿಧ ಒಕ್ಕೂಟಗಳ ಅಧ್ಯಕ್ಷರಾದ ರವಿ, ಜೆಸಿಂತಾ ಫರ್ನಾಂಡಿಸ್, ಸುಕೇಶ್, ಶೇಖರ ಪೂಜಾರಿ, ಮೇಲ್ವಿಚಾರಕರಾದ ಶಿವಲಕ್ಷ್ಮಿ, ಸೇವಾ ಪ್ರತಿನಿಧಿಗಳಾದ ಸುಜಾತ, ವೀಣಾ, ಸುಜಾತ, ಮಾಡದಂಗಡಿ ಶಾಲಾ ಮುಖ್ಯೋಪಾಧ್ಯಾಯ ವಾಣಿಶ್ರೀ, ಸಹಶಿಕ್ಷಕಿ ರಶ್ಮಿ ಎಂ.ಎಸ್, ಸುಮತಿ, ಕಿಟ್ಟು ಮತ್ತಿತರರು ಇದ್ದರು.

ಮೂಡುಬಿದಿರೆ ತಾಲೂಕು ಯೋಜನಾಧಿಕಾರಿ ಸುನೀತಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ವಿದ್ಯಾ ವಂದಿಸಿದರು.