ಮಹಿಳಾ ಸಬಲೀಕರಣಕ್ಕೆ ಧಗ್ರಾ ಆದ್ಯತೆ: ನಗರಸಭಾಧ್ಯಕ್ಷ ಗಜೇಂದ್ರ

| Published : Oct 01 2024, 01:24 AM IST

ಸಾರಾಂಶ

ಕೆರೆಗಳ ಹೂಳು ತೆಗೆಯುವ ಮೂಲಕ ಬರಪೀಡಿತ ಪ್ರದೇಶದಲ್ಲಿ ಅಂತರ್ಜಲ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವ ಧರ್ಮಸ್ಥಳ ಯೋಜನೆ, ಮದ್ಯವರ್ಜನ ಶಿಬಿರಗಳ ಮೂಲಕ ಅನೇಕ ಕುಟುಂಬಗಳು ಬೀದಿ ಪಾಲಾಗುವುದನ್ನು ತಪ್ಪಿಸುತ್ತಿವೆ. ಇಂತಹ ಜನ ಉಪಕಾರಿ ಯೋಜನೆ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಶ್ರೀ ಕ್ಷೇತ್ರದ `ಧರ್ಮಸ್ಥಳ ಯೋಜನೆಯಿಂದ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಅನುಕೂಲವಾಗಿದೆ ಎಂದು ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಹೇಳಿದರು.

ನಗರ ವಾಸವಿ ಕಲ್ಯಾಣ ಮಂಟಪ ಭಾನುವಾರ ಆಯೋಜಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃಧ್ಧಿ ಯೋಜನೆ ಚಿಕ್ಕಬಳ್ಳಾಪುರ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಧಗ್ರಾ ಯೋಜನೆಗಳ ಕೊಡುಗೆ

ಕೆರೆಗಳ ಹೂಳು ತೆಗೆಯುವ ಮೂಲಕ ಬರಪೀಡಿತ ಪ್ರದೇಶದಲ್ಲಿ ಅಂತರ್ಜಲ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವ ಧರ್ಮಸ್ಥಳ ಯೋಜನೆ, ಮದ್ಯವರ್ಜನ ಶಿಬಿರಗಳ ಮೂಲಕ ಅನೇಕ ಕುಟುಂಬಗಳು ಬೀದಿ ಪಾಲಾಗುವುದನ್ನು ತಪ್ಪಿಸುತ್ತಿವೆ. ಇಂತಹ ಜನ ಉಪಕಾರಿ ಯೋಜನೆ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷ ಜೆ.ನಾಗರಾಜ್ , ಖಾದಿಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್, ರೈತ ಜನಸೇನಾ ಜಿಲ್ಲಾಧ್ಯಕ್ಷೆ ಸುಷ್ಮಾಶ್ರೀನಿವಾಸ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃಧ್ಧಿ ಯೋಜನಾ ನಿರ್ಧೇಶಕ ಧನಂಜಯ,ಮಂಜುನಾಥ್, ಎಂ.ಐಎಸ್.ನಾಗರಾಜು, ಪ್ರಶಾಂತ್,ಕೃಷ್ಣ ,ಮತ್ತಿತರರು ಇದ್ದರು.