ಸಾರಾಂಶ
ಧರ್ಮಸ್ಥಳ ಗ್ರಾಮದಲ್ಲಿ ಅನಾಮಧೇಯ ಶವ ಪತ್ತೆ ಪ್ರಕರಣದ ತನಿಖೆ ಆರಂಭಿಸಿ 12 ದಿನಗಳವರೆಗೆ ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿ ನಾಯಕರು, ಈಗ ಇಲ್ಲಸಲ್ಲದ ಮಾತುಗಳನ್ನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ವಿಧಾನಸಭೆ
ಧರ್ಮಸ್ಥಳ ಗ್ರಾಮದಲ್ಲಿ ಅನಾಮಧೇಯ ಶವ ಪತ್ತೆ ಪ್ರಕರಣದ ತನಿಖೆ ಆರಂಭಿಸಿ 12 ದಿನಗಳವರೆಗೆ ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿ ನಾಯಕರು, ಈಗ ಇಲ್ಲಸಲ್ಲದ ಮಾತುಗಳನ್ನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣದ ಚರ್ಚೆಗೆ ಉತ್ತರ ನೀಡುವ ವೇಳೆ ಶುಕ್ರವಾರ ಧರ್ಮಸ್ಥಳ ವಿಚಾರ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಧರ್ಮಸ್ಥಳ ಗ್ರಾಮದಲ್ಲಿ ಶವ ಪತ್ತೆಗೆ ಸಂಬಂಧಿಸಿ ಎಸ್‌ಐಟಿ ರಚಿಸಿದ್ದನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರೇ ಸ್ವಾಗತಿಸಿದ್ದಾರೆ. ಅಲ್ಲದೆ, ತನಿಖೆ ಆರಂಭವಾಗಿ 12 ದಿನಗಳವರೆಗೆ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡಿದ್ದರು. 15 ಜಾಗಗಳಲ್ಲಿ ಅನಾಮಧೇಯ ಶವ ಪತ್ತೆಗೆ ಸ್ಥಳ ಅಗೆಯಲಾಗಿದೆ. ಅದರಲ್ಲಿ 2 ಕಡೆ ಅಸ್ಥಿ ಮತ್ತು ಮೂಳೆ ಸಿಕ್ಕಿದೆ. 13 ಕಡೆ ಯಾವುದೇ ಶವ ಸಿಕ್ಕಿಲ್ಲ ಎಂದು ತಿಳಿದ ಕೂಡಲೇ ಬಿಜೆಪಿ ನಾಯಕರು ನಾಟಕ ಆರಂಭಿಸಿದ್ದಾರೆ ಎಂದರು.