ಧಾರವಾಡ ಕೃಷಿ ವಿವಿ ಕೊಡುಗೆ ಅನನ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

| Published : Oct 27 2024, 02:28 AM IST / Updated: Oct 27 2024, 02:29 AM IST

ಧಾರವಾಡ ಕೃಷಿ ವಿವಿ ಕೊಡುಗೆ ಅನನ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Share this Article
  • FB
  • TW
  • Linkdin
  • Email

ಸಾರಾಂಶ

ಈ ರಾಷ್ಟ್ರಕ್ಕೆ ಶೈಕ್ಷಣಿಕ ಸೇವೆ ನೀಡುವಲ್ಲಿ ಧಾರವಾಡದ ಪಾತ್ರ ಅನನ್ಯ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಮರಿಸಿದರು.

ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇಲ್ಲಿಯ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಭಿವೃದ್ಧಿ ಕೇಂದ್ರದಲ್ಲಿ ಶನಿವಾರ ನಡೆದ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಉದ್ಘಾಟನೆಯಲ್ಲಿ ಆನ್‌ಲೈನ್ ಮೂಲಕ ಪಾಲ್ಗೊಂಡು ಮಾತನಾಡಿದರು. ಮಹಿಳೆಯರಿಗಾಗಿಯೇ ಆರಂಭಗೊಂಡ ಕಾಲೇಜು ಮಹಿಳೆಯರ ಅಭಿವೃದ್ಧಿಗೆ ನೀಡಿದ ಸೇವೆಯನ್ನು ಶ್ಲಾಘಿಸಿದರು.

50 ವರ್ಷ ಹಿಂದೆಯೇ ಈ ಕಾಲೇಜನ್ನು ಕಟ್ಟಲಾಗಿದೆ. ಧಾರವಾಡ ಎಂದರೆ ಉತ್ತರ ಕರ್ನಾಟಕದ ಹೆಬ್ಬಾಗಿಲು, ವಿದ್ಯಾ ಕಾಶಿ ಅಂತಾನೆ ಕರೆಯಲಾಗುತ್ತದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯ ನಮ್ಮೆಲ್ಲರ ಹೆಮ್ಮೆ. ಈ ರಾಷ್ಟ್ರಕ್ಕೆ ಶೈಕ್ಷಣಿಕ ಸೇವೆ ನೀಡುವಲ್ಲಿ ಧಾರವಾಡದ ಪಾತ್ರ ಅನನ್ಯ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮರಿಸಿದರು.

ಕೃಷಿ ರಾಷ್ಟ್ರದ ಬೆನ್ನೆಲುಬು ಎಂದು ಹೇಳುತ್ತೇವೆ. ಶೇ. 70ರಷ್ಟು ಜನರು ಕೃಷಿಯನ್ನೇ ತಮ್ಮ ಜೀವನಾಧಾರವಾಗಿ ಅವಲಂಭಿಸಿದ್ದಾರೆ. ಅಂತಹ, ಕೃಷಿಯಲ್ಲಿ ತೊಡಗಿರುವ ರೈತರ ಬೆನ್ನೆಲುಬು ನಮ್ಮ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ. ವಿಶೇಷವಾಗಿ, ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆ ಕ್ಷೇತ್ರದಲ್ಲಿ ಗಣನೀಯ ಸೇವೆಯನ್ನು ನೀಡುತ್ತಿದೆ ಎಂದರು.

ಮಹಾವಿದ್ಯಾಲಯ 50 ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಈ ವರೆಗೆ ಸೇವೆ ಸಲ್ಲಿಸಿದ ಎಲ್ಲ ಪ್ರಾಚಾರ್ಯರನ್ನು, ಶಿಕ್ಷಕರನ್ನು ಹಾಗೂ ಸಿಬ್ಬಂದಿಯನ್ನು ನಾನು ಈ ಸಂದರ್ಭದಲ್ಲಿ ಸ್ಮರಿಸಿಕೊಂಡು, ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. 50 ವರ್ಷಗಳ ಹಿಂದೆ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸುವುದು ಸುಲಭವಾಗಿರಲಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೃಷಿ ವಿವಿ ಕುಲಪತಿ ಪ್ರೊ. ಪಿ.ಎಲ್. ಪಾಟೀಲ್ ಸೇರಿದಂತೆ ವಿವಿ ಅಧಿಕಾರಿಗಳು ಇದ್ದರು.