ಸಾರಾಂಶ
ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯ್ತಿ ಬಿಜೆಪಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸ್ಥಳೀಯ ನ್ಯಾಯಾಲಯದಲ್ಲೇ ಇತ್ಯರ್ಥ ಪಡಿಸಿಕೊಳ್ಳುವಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಕನ್ನಡಪ್ರಭ ವಾರ್ತೆ ನವದೆಹಲಿ
ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯ್ತಿ ಬಿಜೆಪಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸ್ಥಳೀಯ ನ್ಯಾಯಾಲಯದಲ್ಲೇ ಇತ್ಯರ್ಥ ಪಡಿಸಿಕೊಳ್ಳುವಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.ಹತ್ಯೆ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶ ನಿರಾಕರಿಸಿ, ಸ್ಥಳೀಯ ಹಾಗೂ ಹೈಕೋರ್ಟ್‌ಗಳು ಆದೇಶ ನೀಡಿದ್ದವು. ಹೈಕೋರ್ಟ್ ಆದೇಶ ಪ್ರಶ್ನಿಸಿ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ನ್ಯಾ.ಬೇಲಾ ಎಂ ತ್ರಿವೇದಿ ನೇತೃತ್ವದ ಪೀಠದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ರಾಜಕೀಯ ದುರುದ್ದೇಶದಿಂದ ಅವರನ್ನು ಹತ್ತಿಕ್ಕಲು ಯತ್ನಿಸಲಾಗುತ್ತಿದೆ ಎಂದು ವಿನಯ್ ಕುಲಕರ್ಣಿ ಪರ ವಕೀಲರು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಕೊಲೆಯಂತಹ ಗಂಭೀರ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಡೆ ಬಿಟ್ಟಿರುವುದೇ ದೊಡ್ಡ ವಿಚಾರ. ತೀರ್ಪಿನಲ್ಲಿದ್ದ ಗೊಂದಲ ತಿಳಿಗೊಳಿಸಲಾಗಿದೆ. ಟ್ರಯಲ್ ಕೋರ್ಟ್ ನಲ್ಲೇ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಿ ಎಂದು ಸೂಚಿಸಿ, ಅರ್ಜಿಯನ್ನು ವಜಾಗೊಳಿಸಿತು.