ಅನಧಿಕೃತವಾಗಿ ಪ್ರಾಣಿವಧೆ, ಅನುಮತಿ ಇಲ್ಲದೆ ಮಾಂಸ ಸಾಗಾಣಿಕೆ ಇಲ್ಲಜಿಲ್ಲೆಯ ಮಹಾನಗರ, ಎಲ್ಲ ನಗರ ಪಟ್ಟಣಗಳ ಹಾಗೂ ಇತರ ಪ್ರದೇಶಗಳಲ್ಲಿ ಅಧಿನಿಯಮ ಉಲ್ಲಂಘನೆ ಆಗದಂತೆ ಮುಂಜಾಗ್ರತೆ ವಹಿಸಲು ಪ್ರತಿ ತಾಲೂಕಿಗೆ ಆಯಾ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ಸಮಿತಿಗಳನ್ನು ರಚಿಸಿ, ಆದೇಶಿಸಲಾಗಿದೆ. ಪ್ರತಿ ಸಮಿತಿಯು ತಮ್ಮ ವ್ಯಾಪ್ತಿಯ ಪ್ರದೇಶಗಳಲ್ಲಿನ ಪ್ರಾಣಿ ವಧಾಲಯಗಳ ಬಗ್ಗೆ ಮಾಹಿತಿ ಪಡೆದು, ಪರಿಶೀಲಿಸಬೇಕು.