ಇಂದು ಹುಬ್ಬಳ್ಳಿ ಧಾರವಾಡ ಮಹಾನಗರ ಬಂದ್ಮಹಾನಗರದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ. ಈ ರಜೆ ಸರಿದೂಗಿಸಲು ಮುಂದಿನ ಎರಡು ಶನಿವಾರಗಳನ್ನು ಪೂರ್ತಿಯಾಗಿ ನಡೆಸಲು ಶಾಲಾ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಆದರೆ, ಪಿಯು, ಪದವಿ ಕಾಲೇಜು, ಸರ್ಕಾರಿ ಇಲಾಖೆಗಳ ಕುರಿತಾಗಿ ಶಿಕ್ಷಣ ಇಲಾಖೆ ಯಾವುದೇ ಆದೇಶ ಹೊರಡಿಸಿಲ್ಲ.