ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಯ ಕೊಡುಗೆ!ಜಿಲ್ಲಾ ಕೇಂದ್ರವಾದರೂ ನಿರೀಕ್ಷಿತ ಅಭಿವೃದ್ಧಿ ಹೊಂದದ ಧಾರವಾಡ ನಗರಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾನಮಾನ ನೀಡಬೇಕೆಂದು ಹಲವು ವರ್ಷಗಳಿಂದ ಹೋರಾಟ ನಡೆದಿತ್ತು. ಆದರೆ, ಕಳೆದ ಮೂರು ವರ್ಷಗಳಿಂದ ಈ ಹೋರಾಟ ಗಂಭೀರತೆ ಪಡೆದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗುರುವಾರ ಸಚಿವ ಸಂಪುಟದಲ್ಲಿ ಧಾರವಾಡ ಜನತೆಯ ಮಹತ್ತರ ಬೇಡಿಕೆಗೆ ಅಸ್ತು ಎಂದಿದೆ.