ಶಿಕ್ಷಣದಲ್ಲಿ ತಂತ್ರಜ್ಞಾನ ಆಧಾರಿತ ಬೋಧನೆ ಇರಲಿ: ಡಾ. ಶಿವಪ್ರಸಾದಸಾಂಪ್ರದಾಯಿಕ ಬೋಧನಾ ಪದ್ಧತಿ ಬಿಟ್ಟು ತಂತ್ರಜ್ಞಾನ ಆಧಾರಿತ ಬೋಧನಾ ಪದ್ಧತಿ ರೂಢಿಸಿಕೊಂಡಾಗ ಮಾತ್ರ ಕಲಿಕೆ ಪರಿಣಾಮಕಾರಿಯಾಗಲಿದೆ. ಪಠ್ಯಕ್ರಮ ರಚನೆಯಲ್ಲಿ ಬದಲಾವಣೆ ಬರಬೇಕಿದೆ. ಇದಲ್ಲದೇ, ಶಿಕ್ಷಕರು ಕಾಲಕಾಲಕ್ಕೆ ತಕ್ಕಂತೆ ಬದಲಾವಣೆ ಹೊಂದಬೇಕು. ಅಂದಾಗ ಮಾತ್ರವೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವು ಮಾನವ ಸಂಪನ್ಮೂಲ ನಿರ್ಮಿಸಲು ಸಾಧ್ಯವಾಗಲಿದೆ.